ಮಂಗಳೂರು, ಮಾ 18 (DaijiworldNews/DB): ಕರ್ತವ್ಯದ ವೇಳೆ ಬುಲೆಟ್ ನಲ್ಲಿ ಸಂಚರಿಸುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣಾ ಎಎಸ್ ಐ ಮೃತ ಪಟ್ಟ ಘಟನೆ ಶುಕ್ರವಾರ ನಡೆದಿದೆ.
ಮಂಗಳೂರು ಪೂರ್ವ ಪೊಲೀಸ್ ಠಾಣಾ ಎಎಸ್ ಐ ಸದಾಶಿವ ಮೃತಪಟ್ಟವರು.
ಕರ್ತವ್ಯದ ವೇಳೆ ಬುಲೆಟ್ನಲ್ಲಿ ತೆರಳುತ್ತಿರುವ ಸಂದರ್ಭ ಅಪಘಾತವಾಗಿ ಗಂಭೀರ ಗಾಯಗೊಂಡಿದ್ದರು. ಅಪಘಾತವಾದ ತತ್ ಕ್ಷಣ ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.