ಮಂಗಳೂರು, ಮಾ 19 (DaijiworldNews/DB): ಗುದನಾಳದಲ್ಲಿ 36 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಬಚ್ಚಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಮಾರ್ಚ್ 18 ರ ಶುಕ್ರವಾರದಂದು ಬಂಧಿಸಿದ್ದಾರೆ.
ಪೇಸ್ಟ್ ರೂಪದಲ್ಲಿ ಚಿನ್ನವನ್ನು ಗುದನಾಳದಲ್ಲಿ ಬಚ್ಚಿಟ್ಟುಕೊಂಡು ಆತ ದುಬೈಯಿಂದ ಪ್ರಯಾಣಿಸುತ್ತಿದ್ದ. ಆತನ ಬಳಿ 24 ಕ್ಯಾರೆಟ್ ನ 706 ಗ್ರಾಂ ಚಿನ್ನ ಪತ್ತೆಯಾಗಿದ್ದು, ಎಲ್ಲವನ್ನೂ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಚಿನ್ನದ ಒಟ್ಟು ಮೌಲ್ಯ 36,53,550 ರೂ. ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಈ ಹಿಂದೆಯೂ ಕೂಡಾ ಇಂತಹ ಹಲವು ಪ್ರಕರಣಗಳು ವರದಿಯಾಗಿತ್ತು. ಆದರೆ ಅಧಿಕಾರಿಗಳು ಸೂಕ್ಷ್ಮವಾಗಿ ಪರಿಶೀಲಿಸಿಯೇ ಪ್ರಯಾಣಿಕರನ್ನು ಹೊರ ಬಿಡುತ್ತಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಈ ರೀತಿಯ ಹಲವು ಪ್ರಕರಣಗಳು ಈ ಹಿಂದೆಯೂ ವರದಿಯಾಗಿದ್ದು, ಕಸ್ಟಮ್ಸ್ ಅಧಿಕಾರಿಗಳು ಸೂಕ್ಷ್ಮವಾಗಿ ಪರೀಕ್ಷಿಸಿದ ನಂತರವೇ ಪ್ರಯಾಣಿಕರನ್ನು ಹೊರ ಬಿಡುತ್ತಿದ್ದಾರೆ.