ತುಮಕೂರು, ಡಿ21(SS): ಶ್ರೀ ಶಿವಕುಮಾರ ಸ್ವಾಮಿಗಳು ಹಳೆಯ ಮಠದಲ್ಲಿ ವಿಶ್ರಾಂತಿ ಪಡೆಯುತ್ತಿದ್ದು, ಮತ್ತೆ ಸಣ್ಣದಾಗಿ ನಡೆದಾಡುವ ದೇವರಿಗೆ ಜ್ವರ ಕಾಣಿಸಿಕೊಂಡಿದೆ.
ಕಳೆದ ಕೆಲ ದಿನಗಳ ಹಿಂದೆಯಷ್ಟೇ ಚೆನ್ನೈನ ಡಾ.ರೇಲಾ ಸಲಹೆಯಂತೆ ಸಿದ್ಧಗಂಗಾ ಆಸ್ಪತ್ರೆ ವೈದ್ಯರ ತಂಡ ಚಿಕಿತ್ಸೆ ನೀಡಿದೆ. ಸದ್ಯ ಶ್ರೀಗಳ ಆರೋಗ್ಯ ಸ್ಥಿರವಾಗಿದ್ದು, ಜ್ವರ ಕಾಣಿಸಿದ್ದರಿಂದ ಸಹಜವಾಗಿ ಮಠಾಧ್ಯಕ್ಷ ಸಿದ್ದಲಿಂಗ ಶ್ರೀಗಳು ಆತಂಕಗೊಂಡಿದ್ದಾರೆ.
ಅನಾರೋಗ್ಯದ ನಡುವೆಯೂ ಶ್ರೀಗಳು ಇಷ್ಟಲಿಂಗ ಪೂಜೆ ನೆರವೇರಿಸಿ ಸ್ವಲ್ಪ ಪ್ರಸಾದ ಸೇವಿಸಿದ್ದಾರೆ. ಹೆಚ್ಚಿನ ವಿಶ್ರಾಂತಿ ಅಗತ್ಯವಿರುವುದರಿಂದ ಹಳೆಯ ಮಠಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
ಹಳೆಯ ಮಠದಿಂದ ಅನತಿ ದೂರದಲ್ಲೇ ಬ್ಯಾರಿಕೇಡ್ ಹಾಕಿ ಪೊಲೀಸರನ್ನು ನಿಯೋಜಿಸಲಾಗಿದೆ.