ಮಂಗಳೂರು, ಡಿ21(SS): ಮೋದಿ ನೇತ್ರತ್ವದ ಕೇಂದ್ರ ಸರಕಾರ ಲಿಂಗತ್ವ ಅಲ್ಪಸಂಖ್ಯಾತರ ವಿರುದ್ಧ ಮಸೂದೆ ಮಂಡಿಸಿದೆ ಎಂದು ಆರೋಪಿಸಿ ಮಂಗಳಮುಖಿಯರು ನಗರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಮುಂದೆ, ನವ ಸಹಜ ಸಮುದಾಯ ಸಂಘಟನೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ರಾಜ್ಯಸಭೆಯಲ್ಲಿ ಟ್ರಾನ್ಸ್ ಬಿಲ್ 2018 ಮಂಡಿಸುವ ಮೂಲಕ ಮಂಗಳ ಮುಖಿಯರ ಮೇಲೆ ಪ್ರಹಾರ ಮಾಡಿದೆ ಎಂದು ಆರೋಪಿಸಿ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದ ಮಂಗಳಮುಖಿಯರು ಕೂಡಲೇ ಮಸೂದೆ ಹಿಂಪಡೆಯಬೇಕೆಂದು ಒತ್ತಾಯಿಸಿದ್ದಾರೆ.
ಈ ಪ್ರತಿಭಟನೆಯಲ್ಲಿ ಯಾವುದೇ ಕಾರಣಕ್ಕೂ ಕೇಂದ್ರ ಸರಕಾರ ಈ ಮಸೂದೆಯನ್ನು ಜಾರಿಗೊಳಿಸಬಾರದು. ಮಂಗಳಮುಖಿಯರಿಗೆ ಪರವಾದ ಮಸೂದೆಯನ್ನೇ ಜಾರಿಗೆ ತರಬೇಕು ಎಂದು ಆಗ್ರಹಿಸಿದ್ದಾರೆ.
ಹಲವಾರು ಮಂಗಳಮುಖಿಯರು ಒಟ್ಟು ಸೇರಿ ಪ್ರತಿಭಟನೆಗೆ ಸಾಥ್ ನೀಡಿದ್ದಾರೆ.