ಮಂಗಳೂರು, ಡಿ21(SS): ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ ವೇತನ ಪರಿಷ್ಕರಣೆ ಬೇಡಿಕೆ ಮುಂದಿಟ್ಟುಕೊಂಡು ಮುಷ್ಕರಕ್ಕೆ ಕರೆ ನೀಡಿದ್ದು, ಎಲ್ಲೆಡೆ ಬ್ಯಾಂಕ್ ಸಿಬ್ಬಂದಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
ವೇತನ ಪರಿಷ್ಕರಣೆ ಮತ್ತು ಸರಕಾರಿ ಸ್ವಾಮ್ಯದ ಬ್ಯಾಂಕ್ಗಳ ವಿಲೀನವನ್ನು ವಿರೋಧಿಸಿ, ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ (ಎಐಬಿಒಸಿ) ದೇಶವ್ಯಾಪಿ ಮುಷ್ಕರ ನಡೆಸುತ್ತಿದ್ದು, ಇದನ್ನು ಬೆಂಬಲಿಸಿ ಮಂಗಳೂರಿನಲ್ಲಿಯೂ ಬ್ಯಾಂಕ್ ಸಿಬ್ಬಂದಿ ಪ್ರತಿಭಟನೆ ನಡೆಸಿದ್ದಾರೆ.
ಮಂಗಳೂರಿನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಬ್ಯಾಂಕ್ ಸಿಬ್ಬಂದಿ ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದ್ದಾರೆ.
ಡಿ. 26ರಂದು ಮುಷ್ಕರ ನಡೆಸಲು ಯುನೈಟೆಡ್ ಫೋರಂ ಆಫ್ ಬ್ಯಾಂಕ್ಸ್ ಯೂನಿಯನ್ ಕರೆ ನೀಡಿದೆ. ಹಾಗಾಗಿ, ಈ ಮುಷ್ಕರಗಳು ಸೇರಿದಂತೆ 4ನೇ ಶನಿವಾರ, ಭಾನುವಾರ, ಕ್ರಿಸ್ಮಸ್ ಕಾರಣಗಳಿಂದಾಗಿ ಬ್ಯಾಂಕುಗಳಿಗೆ ಡಿ. 24 ಸೋಮವಾರ ಹೊರತುಪಡಿಸಿ ಶುಕ್ರವಾರದಿಂದ ಬುಧವಾರದವರೆಗೆ ಸಾಲು ರಜೆಗಳು ಇರಲಿವೆ. ಆದರೆ, ಖಾಸಗಿ ಬ್ಯಾಂಕುಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ.