ಕಾಸರಗೋಡು, ಮಾ 20 (DaijiworldNews/HR): ಜಿಲ್ಲೆಯಲ್ಲಿ ಭಾನುವಾರ ಐದು ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಏಳು ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 38 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 254 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಇದುವರೆಗೆ ಜಿಲ್ಲೆಯಲ್ಲಿ 1,66,462 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಪೈಕಿ 1,64,922 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ ಮೃತಪಟ್ಟವರ ಸಂಖ್ಯೆ 1,350 ಕ್ಕೇರಿದೆ.