ಮಂಗಳೂರು, ಮಾ. 20 (DaijiworldNews/SM): ಕರಾವಳಿಯಲ್ಲಿ ಹಿಜಾಬ್ ವಿವಾದ ಬಳಿಕ ಇದೀಗ ಶಾಲಾ ಕಾಲೇಜುಗಳು ಪುನರಾರಂಭಗೊಂಡಿದ್ದು, ಶಾಂತಿ ಕಾಪಾಡುವ ನಿಟ್ಟಿನಲ್ಲಿ ನಿಷೇಧಾಜ್ಞೆ ಮುಂದುವರೆಸಲಾಗಿದೆ.
ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜು ಆವರಣದಲ್ಲಿ ಮಾರ್ಚ್ 31ರ ತನಕ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಕಮಿಷನರ್ ಶಶಿಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.