ಮಂಗಳೂರು, ಮಾ.22(DaijiworldNews/SM): ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು 2022ರ ಏಪ್ರಿಲ್ 1 ರಂದು ಕರಾವಳಿ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.
ಏಪ್ರಿಲ್1 ಶುಕ್ರವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಂಗಳೂರು ನಗರದ ಪುರಭವನದ ಸಭಾಂಗಣದಲ್ಲಿ ನಡೆಯುವ ಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ. ಜಿಲ್ಲಾಡಳಿತ ಹಾಗೂ ವಿಶ್ವವಿದ್ಯಾಲಯಗಳ ಆಶ್ರಯದಲ್ಲಿ ಸಭೆ ಆಯೋಜಿಸಲಾಗಿದೆ.ಚುನಾವಣಾ ಸುಧಾರಣಾ ಕ್ರಮಗಳ ಬಗ್ಗೆ ಸಭೆ ನಡೆಯಲಿದ್ದು, ಅದರಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಹಿತಿ ನೀಡಲಿದ್ದಾರೆ ಎಂದು ಅವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.