ಕುಂದಾಪುರ, ಮಾ 23 (DaijiworldNews/MS): ತ್ರಾಸಿ ಗ್ರಾಮದ ಅರಮ ದೇವಸ್ಥಾನದ ಹತ್ತಿರ ಸೌಪರ್ಣಿಕಾ ನದಿಯಲ್ಲಿ ಅನಧಿಕೃತ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ.
ಮರಳು ಗಣಿಗಾರಿಕೆಗೆ ಬಳಸುತ್ತಿದ್ದ 4 ದೋಣಿಗಳು ಹಾಗೂ ಬೈಂದೂರು ತಾಲೂಕಿನ ನಾಡ ಗ್ರಾಮದ ಗುಡ್ಡೆಯಂಗಡಿ ಮೇವಾಡಿ ಸೇತುವೆ ಸಮೀಪ ಅನಧಿಕೃತ ಮರಳು ಗಣಿಗಾರಿಕೆಗೆ ಬಳಸುತ್ತಿದ್ದ 2 ದೋಣಿಗಳನ್ನು ಭೂವಿಜ್ಞಾನಿ ಸಂಧ್ಯಾ ವಶಕ್ಕೆ ಪಡೆದಿರುತ್ತಾರೆ.
ದಾಳಿ ಸಂದರ್ಭ ನಾಡ ಬಡಾಕೆರೆ ವ್ಯಾಪ್ತಿಯ ಕೆಲವು ಕಡೆ ಅನಧಿಕೃತ ಮರಳು ದಂಧೆ ನಡೆಸುವವರು ದೋಣಿಗಳನ್ನು ಹಾಗೂ ಇನ್ನಿತರ ಪರಿಕರಗಳನ್ನು ನೀರಿನಲ್ಲಿ ಮುಳುಗಿಸಿ ಪರಾರಿಯಾಗಿರುವುದು ಕಂಡುಬಂದಿದೆ ಎಂದು ಸಂಧ್ಯಾ ತಿಳಿಸಿದ್ದಾರೆ.