ಸುಳ್ಯಪದವು, ಮಾ 26 (DaijiworldNews/DB): ಮಾನಸಿಕ ಒತ್ತಡದಿಂದ ಬಳಲುತ್ತಿದ್ದ ಶಬರಿ ನಗರದ ಕೂಲಿ ಕಾರ್ಮಿಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.
ಪಡುವನ್ನೂರು ಗ್ರಾಮದ ಸುಳ್ಯಪದವು ಸಮೀಪದ ಶಬರಿ ನಗರದ ನಿವಾಸಿ ಅಶೋಕ ಮೂಲ್ಯ (43) ಆತ್ಮಹತ್ಯೆ ಮಾಡಿಕೊಂಡವರು. ಮನೆಯ ಸಮೀಪ ಕೊಟ್ಟಿಗೆಯಲ್ಲಿಅವರು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮಾನಸಿಕ ಒತ್ತಡವೇ ಆತ್ಮಹತ್ಯೆಗೆ ಕಾರಣ ಎಂದು ಶಂಕಿಸಲಾಗಿದೆ.
ಕಳೆದ ಕೆಲವು ತಿಂಗಳುಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಅವರಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಚಿಕಿತ್ಸೆಯ ಬಳಿಕವೂ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು. ಇದೀಗ ಆತ್ಮಹತ್ಯೆಗೆ ಇದೇ ಕಾರಣವಾಗಿರಬಹುದು ಎಂಬುದಾಗಿ ಶಂಕೆ ವ್ಯಕ್ತವಾಗಿದೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821