ಮಂಗಳೂರು, ಮಾ 27 (DaijiworldNews/HR): ಮಾರ್ಚ್ 28,29 ರಂದು ನಡೆಯಲಿರುವ ಅಖಿಲ ಭಾರತ ಮಹಾಮುಷ್ಕರದ ಸಂದೇಶವನ್ನು ಸಾರಲು ಮಂಗಳೂರು ನಗರದಲ್ಲಿ ಪಾದಯಾತ್ರೆಗೆ ಕೇಂದ್ರ ಕಾರ್ಮಿಕ ಸಂಘಟನೆಗಳ ಒಕ್ಕೂಟದಿಂದ ಚಾಲನೆ ನೀಡಲಾಯಿತು.
ಈ ಸಂಧರ್ಭದಲ್ಲಿ ಮಾತನಾಡಿದ ಬ್ಯಾಂಕ್ ಅಧಿಕಾರಿಗಳ ಸಂಘಟನೆಯ ರಾಜ್ಯಾಧ್ಯಕ್ಷ ರಾಘವ ಕೆ, ಸಮಾಜದಲ್ಲಿ ಸಂಪತ್ತನ್ನು ಸ್ರಷ್ಠಿಸುವ ಕಾರ್ಮಿಕ ವರ್ಗದ ಹಿತಾಸಕ್ತಿಯನ್ನು ಕಾಪಾಡಬೇಕಾದ ಕೇಂದ್ರದ ನರೇಂದ್ರ ಮೋದಿ ಸರಕಾರ ಹೆಜ್ಜೆ ಹೆಜ್ಜೆಗೂ ಕಾರ್ಪೋರೇಟ್ ಕಂಪೆನಿಗಳ ಹಿತಾಸಕ್ತಿಯನ್ನು ಕಾಪಾಡುವ ಮೂಲಕ ನವ ಉದಾರೀಕರಣ ನೀತಿಗಳನ್ನು ಆಕ್ರಮಣಕಾರಿಯಾಗಿ ಜಾರಿ ಮಾಡುತ್ತಿದೆ ಎಂದರು.
ಇನ್ನು ದೇಶದ ಸಂಪತ್ತಾದ ಸಾರ್ವಜನಿಕ ಉದ್ದಿಮೆಗಳನ್ನು ಖಾಸಗೀಕರಣ ಮಾಡುವ ಮೂಲಕ ದೇಶವನ್ನೇ ಕೊಳ್ಳೆ ಹೊಡೆಯುತ್ತಿದೆ. ಇಂತಹ ಸರಕಾರದ ಜನವಿರೋಧಿ ನೀತಿಗಳನ್ನು ಸೋಲಿಸುವ ಮೂಲಕ ದೇಶ ಉಳಿಸುವ ಜೊತೆಗೆ ಜನರ ಬದುಕನ್ನು ರಕ್ಷಿಸಬೇಕಾಗಿದೆ ಎಂದು ಹೇಳಿದ್ದಾರೆ.
ಪಾದಯಾತ್ರೆಯಲ್ಲಿ ಕೇಂದ್ರ ಕಾರ್ಮಿಕ ಸಂಘಟನೆಗಳ ನಾಯಕರಾದ ಜೆ.ಬಾಲಕ್ರಷ್ಣ ಶೆಟ್ಟಿ,ಸುನಿಲ್ ಕುಮಾರ್ ಬಜಾಲ್,ಎಚ್.ವಿ.ರಾವ್, ಸೀತಾರಾಮ ಬೇರಿಂಜ, ಕರುಣಾಕರ್,ವಿ.ಕುಕ್ಯಾನ್, ಪ್ರವೀಣ್,ಯೋಗೀಶ್ ಜಪ್ಪಿನಮೊಗರು,ಜಯಂತಿ ಶೆಟ್ಟಿ, ಭಾರತಿ ಬೋಳಾರ, ಮುಸ್ತಫಾ, ನಾಗೇಶ್ ಕೋಟ್ಯಾನ್, ಜಯಲಕ್ಷ್ಮಿ,ಬ್ಯಾಂಕ್ ನೌಕರರ ಸಂಘಟನೆಯ ನಾಯಕರಾದ ಫಣೀಂದ್ರ,ಸುರೇಶ್ ಹೆಗ್ಡೆ, ಸದಾಶಿವ,ಪುರುಷೋತ್ತಮ ಪೂಜಾರಿ,ವಿವಿಧ ಸಂಘಟನೆಗಳ ಮುಖಂಡರಾದ ಡಾ.ಕ್ರಷ್ಣಪ್ಪ ಕೊಂಚಾಡಿ, ಸಂತೋಷ್ ಬಜಾಲ್ ಮುಂತಾದವರು ಉಪಸ್ಥಿತರಿದ್ದರು.