ಮಂಗಳೂರು, ಮಾ. 27 (DaijiworldNews/SM): ಸೋಮವಾರದಂದು ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದ್ದು, ದ.ಕ. ಜಿಲ್ಲೆಯಲ್ಲಿ ಅಂತಿಮ ಸಿದ್ಧತೆ ಕುರಿತು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಎಲ್ಲಾ 99 ಪರೀಕ್ಷಾ ಕೇಂದ್ರಗಳ ಸಿದ್ಧತೆ ಕುರಿತು ಡಿಸಿ ಮಾಹಿತಿ ಪಡೆದರು.
25 ಮಾರ್ಚ್ 2022ರಂದು ಸರ್ಕಾರ ಹೊರಡಿಸಿದ ಆದೇಶದಂತೆ, ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಯಾವುದೇ ಅಹಿತಕರ ಪರಿಸ್ಥಿತಿಯನ್ನು ಎದುರಿಸಬಾರದು ಎಂದು ಜಿಲ್ಲಾಧಿಕಾರಿ, ತಶಿಲ್ದಾರ್ಗಳಿಗೆ, ಬ್ಲಾಕ್ ಶಿಕ್ಷಣಾಧಿಕಾರಿಗಳು ಮತ್ತು ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡಿದ್ದರು.
ಪರೀಕ್ಷಾ ಕೇಂದ್ರಗಳ 200 ಮೀಟರ್ಗಳ ಸುತ್ತ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಪರೀಕ್ಷೆಗೆ ಹಾಜರಾಗುವ ಅಧಿಕಾರಿಗಳು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳನ್ನು ಹೊರತುಪಡಿಸಿ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಕುಡಿಯುವ ನೀರು, ಶೌಚಾಲಯ, ಆಸನ ವ್ಯವಸ್ಥೆಗಳನ್ನು ಸೂಕ್ತ ಸ್ಥಳಗಳಲ್ಲಿ ಪ್ರದರ್ಶಿಸುವಂತೆ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರಿಗೆ ಸೂಚಿಸಲಾಗಿದೆ. ಯಾವುದೇ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ತೊಂದರೆಯಾಗದಂತೆ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದರು. ಪರೀಕ್ಷಾ ಕರ್ತವ್ಯವನ್ನು ಯಾವುದೇ ಲೋಪವಾಗದಂತೆ ಜವಾಬ್ದಾರಿಯಿಂದ ನಿರ್ವಹಿಸುವಂತೆ ಅಧಿಕಾರಿಗಳಿಗೆ ಡಿಸಿ ಸೂಚಿಸಿದರು.