ಉಡುಪಿ, ಮಾ 28 (DaijiworldNews/MS): ಉಡುಪಿ ಬೋರ್ಡ್ ಹೈಸ್ಕೂಲ್ ಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಭೇಟಿ ನೀಡಿ, ಪರೀಕ್ಷೆಗೆ ಮಾಡಿಕೊಂಡಿರುವ ಸಿದ್ಧತೆ ಪರಿಶೀಲಿಸಿ, ಪರೀಕ್ಷೆ ಬರೆಯಲು ಕುಳಿತಿದ್ದ ವಿದ್ಯಾರ್ಥಿಗಳಿಗೆ ದೈರ್ಯ ತುಂಬಿ ಶುಭ ಹಾರೈಸಿದರು.
ಆ ಬಳಿಕ ಮಾತನಾಡಿದ ಅವರು,ಸರಕಾರದ ಸುತ್ತೋಲೆ ಅನ್ವಯವಾಗಿ ಎಲ್ಲಾ ರೀತಿಯ ಕ್ರಮವನ್ನು ಕೈಗೊಳ್ಳಲಾಗಿದೆ. ಶಿಕ್ಷಣ ಎಲ್ಲರಿಗೂ ಅತಿ ಮುಖ್ಯವಾಗಿದೆ. ಯಾರೂ ಕೂಡ ಪರೀಕ್ಷೆಯಿಂದ ದೂರ ಉಳಿಯಬಾರದು. ಮುಸ್ಲಿಂ ಮುಖಂಡರು ತಮ್ಮ ಮಕ್ಕಳನ್ನು ಪರೀಕ್ಷಾ ಕೇಂದ್ರಕ್ಕೆ ಬಂದು ಬಿಟ್ಟು ಹೋಗುತ್ತಿರುವುದು ಅಭಿನಂದನೀಯ ವಿಷಯವಾಗಿದೆ. ಎಲ್ಲಾ ಸಮುದಾಯದ ಮುಖಂಡರು ಶಿಕ್ಷಣಕ್ಕೆ ಮಹತ್ವ ನೀಡಬೇಕು. ಈ ಹಿಂದೆ ಮುಸಲ್ಮಾನ ಸಮುದಾಯದ ಮುಖಂಡರ ಜೊತೆ ಸಭೆ ನಡೆಸಲಾಗಿತ್ತು ಮುಸ್ಲಿಂ ಮುಖಂಡರು ಕೂಡ ಪರೀಕ್ಷೆ ಬರೆಯಲು ಪ್ರೋತ್ಸಾಹ ನೀಡುತ್ತಿದ್ದಾರೆ. ಯಾವ ರೀತಿ ಪರೀಕ್ಷೆ ನಡೆಸಬೇಕು ಎಂಬುದು ಸುತ್ತೋಲೆಯಲ್ಲಿ ಸ್ಪಷ್ಟವಾಗಿ ಇದೆ. ಸುತ್ತೋಲೆಯಲ್ಲಿ ಇರುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು
ಸಮವಸ್ತ್ರಕ್ಕೆ ಸಂಬಂಧಿಸಿದಂತೆ ಸರಕಾರದ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಜಿಲ್ಲೆಯ 58 ಪರೀಕ್ಷಾ ಕೇಂದ್ರದಲ್ಲೂ ಯಾವುದೇ ಗೊಂದಲ ಇಲ್ಲದೇ ಪರೀಕ್ಷೆ ಆರಂಭಗೊಂಡಿದ್ದು ಜಿಲ್ಲೆಯಲ್ಲಿ 14 ಸಾವಿರ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯುತ್ತಿದ್ದಾರೆ.
ಬಳಿಕ ಜಿಲ್ಲಾಧಿಕಾರಿಯವರು ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಗೆ ಭೇಟಿ ನೀಡಿ, ಸಿದ್ದತೆ ಪರಿಶೀಲಿಸಿದರು.