ಕಾರ್ಕಳ, ಮಾ 28 (DaijiworldNews/HR): ಸಂವಿಧಾನ ಪ್ರಜಾಪ್ರಭುತ್ವೀಯ ಮೌಲ್ಯಗಳ ಉಳಿವಿಗಾಗಿ, ಜನತೆಯ ಹಕ್ಕುಗಳ ಸಂರಕ್ಷಣೆಗಾಗಿ, ರೈತವಿರೋಧಿ ಕಾರ್ಮಿಕ ವಿರೋಧಿ ಕಾನೂನುಗಳ ರದ್ಧತಿ ಕೋರಿ, ಬೆಲೆ ಏರಿಕೆ ನಿಯಂತ್ರಣಕ್ಕಾಗಿ, ಕೋವಿಡ್ ಲಾಕ್ಡೌನ್ ಸಂಕಷ್ಟಕ್ಕೆ ಒಳಗಾದ ಅಸಂಘಟಿತ ಕಾರ್ಮಿಕರಿಗೆ ಪರಿಹಾರ ಸೇರಿದಂತೆ ವಿವಿಧ ಭೇಡಿಕೆಗಳನ್ನು ಮುಂದಿಟ್ಟು ಎಡವಾದಿ ಸಂಘಗಳು ಕರೆ ನೀಡಿದ ಅಖಿಲ ಭಾರತ ಮುಷ್ಕರ ಅಂಗವಾಗಿ ಕಾರ್ಕಳದ ವಿಸ್ತೃತ ಬಸ್ನಿಲ್ದಾಣ ಪರಿಸರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಪುರಸಭಾ ಮುಖ್ಯಾಧಿಕಾರಿ ರೂಪಾ ಶೆಟ್ಟಿ ಅವರಿಗೆ ಮನವಿ ಸಲ್ಲಿಸಲಾಯಿತು.
ಮುಖಂಡರಾದ ಬಾಲಕೃಷ್ಣ ಶೆಟ್ಟಿ, ಸುನೀತಾ ಶೆಟ್ಟಿ, ರತ್ನಾಕರ, ಬೇಬಿ ಭಂಡಾರಿ, ನಾಗೇಶ್, ಮೋಹನ್ಚಂದ್ರ ಮೊದಲಾದವರು ಉಪಸ್ಥಿತರಿದ್ದರು.