ಧರ್ಮಸ್ಥಳ, ಮಾ 28 (DaijiworldNews/HR): ನೇತ್ರಾವತಿ ಸ್ನಾನಘಟ್ಟದ ಬಳಿಯಲ್ಲಿಟ್ಟಿದ್ದ ಬ್ಯಾಗ್ನಿಂದ ನಗದು ಮತ್ತು ಚಿನ್ನಾಭರಣ ಕಳವುಗೈದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಮಿತುನ್ ಚೌವಾಣ್(31) ಎಂದು ಗುರುತಿಸಲಾಗಿದೆ.
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ನೇತ್ರಾವತಿ ಸ್ನಾನಘಟ್ಟದ ಬಳಿ ಯಾತ್ರಾರ್ಥಿಯಾಗಿ ಬಂದ ಕುಂದಾಪುರ ಮೂಲದ ಶ್ರೀಧರ ನಾಯರಿ ಎಂಬವರು ಸ್ಥಾನ ಮಾಡುವ ಸಮಯ ಅವರ ಬ್ಯಾಗ್ ನಲ್ಲಿದ್ದ ಚಿನ್ನಾಭರಣ ಹಾಗೂ ನಗದು ಕಳ್ಳತನ ಆಗಿರುವ ಬಗ್ಗೆ ದೂರು ನೀಡಿದ ಅನ್ವಯ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯಿಂದ ಚಿನ್ನದ ಮಾಲೆ, ಚಿನ್ನದ ಲಕ್ಷ್ಮಿ ಮಾಲೆ, ಬ್ರಾಸ್ ಲೈಟ್, ಚಿನ್ನದ ಉಂಗುರವನ್ನು ವಶಪಡಿಸಿಕೊಳ್ಳಲಾಗಿದ್ದು, ಈ ಎಲ್ಲಾ ಆಭರಣಗಳ ಅಂದಾಜು ಮೌಲ್ಯ ಸುಮಾತು 2.4 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಇನ್ನು ಆರೋಪಿಯು ದೇಶದ ವಿವಿಧ ಪ್ರಸಿದ್ದ ಯಾತ್ರ ಸ್ಥಳಗಳಿಂದ ಕಳ್ಳತನ ಮಾಡುವ ಅಭ್ಯಾಸದಲ್ಲಿ ತೊಡಗಿದ್ದಾನೆ ಎಂದು ತನಿಖೆ ವೇಳೆ ತಿಳಿದು ಬಂದಿದೆ.