ಮಂಗಳೂರು, ಮಾ. 28 (DaijiworldNews/SM): ಬರಡು ಭೂಮಿಯಲ್ಲಿ ಸುರಂಗ ತೋಡಿದ ಭಗೀರಥ ಅಮೈ ಮಹಾಲಿಂಗ ನಾಯ್ಕ್ ಅವರಿಗೆ ಮಾರ್ಚ್ ೨೮ರ ಸೋಮವಾರದಂದು ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರು ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
ಮಹಾಲಿಂಗ ನಾಯ್ಕ್ ಅವರು, ಮುಟ್ಟಾಲೆ ಧರಿಸಿ ಪದ್ಮಶ್ರೀ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಆ ಮೂಲಕ ದೇಶದೆಲ್ಲೆಡೆ ಕೃಷಿ ಪರಂಪರೆಯ ಅರಿವು ಮೂಡಿಸಿದ್ದಾರೆ.
ಇನ್ನು ಇತ್ತೀಚಿಗಷ್ಟೇ ಮಹಾಲಿಂಗ ನಾಯ್ಕ್ ಅವರು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಬರಡು ಭೂಮಿಯಲ್ಲಿ ಅವರು ಮಾಡಿದ ಸಾಧನೆ ಗಮನಿಸಿಕೊಂಡು ಅವರಿಗೆ ಪದ್ಮಶ್ರೀ ಪ್ರಶಸ್ತಿ ಅರಸಿಕೊಂಡು ಬಂದಿತ್ತು.