ಉಡುಪಿ, ಮಾ. 28 (DaijiworldNews/SM): ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ 10 ಸೆಂಟ್ಸ್ ವರೆಗೆ ಕೃಷಿಯಿಂದ ವಸತಿಗೆ ವಲಯ ಬದಲಾವಣೆಗೆ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದೆ.
ಉಡುಪಿ ಜನತೆಯ ಬಹು ಬೇಡಿಕೆಯ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಕೃಷಿ ವಲಯದಲ್ಲಿ 10 ಸೆಂಟ್ಸ್ ಜಾಗ ಅಥವಾ 3000 ಚದರ ಅಡಿ ವರೆಗೆ ವಾಸ್ತವ್ಯದ ಮನೆ ನಿರ್ಮಿಸುವವರಿಗೆ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿಯೇ ಕೃಷಿ ವಲಯದಿಂದ ವಸತಿ ವಲಯಕ್ಕೆ ವಲಯ ಬದಲಾವಣೆಗೆ ಅವಕಾಶ ಕಲ್ಪಿಸುವ ಸಂಬಂಧ ಸೋಮವಾರ ಮಾರ್ಚ್ 28 ರಂದು ನಗರಾಭಿವೃದ್ಧಿ ಇಲಾಖೆ ವಲಯ ನಿಯಮಾವಳಿಗೆ ತಿದ್ದುಪಡಿ ತರುವ ನಿಟ್ಟಿನಲ್ಲಿ ಸಾರ್ವಜನಿಕರ ಸಲಹೆ ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲು 30 ದಿನಗಳ ಕಾಲಾವಕಾಶ ನೀಡಿ ಕರ್ನಾಟಕ ರಾಜ್ಯ ಪತ್ರದಲ್ಲಿ ಕರಡು ಅಧಿಸೂಚನೆ ಹೊರಡಿಸಿದೆ.
ಈ ವಿಷಯದ ಬಗ್ಗೆ ಇಲಾಖೆ ಮಟ್ಟದಲ್ಲಿ ನಿರಂತರವಾಗಿ ಪ್ರಯತ್ನಿಸಿದ ಶಾಸಕ ಕೆ ರಘುಪತಿ ಭಟ್ ಅವರು ವಿಳಂಬವಾದಾಗ ಅಧಿವೇಶನದಲ್ಲಿ "ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಕೃಷಿ ವಲಯದಲ್ಲಿ 10 ಸೆಂಟ್ಸ್ ಜಾಗ ಅಥವಾ 3000 ಚದರ ಅಡಿ ವರೆಗೆ ವಾಸ್ತವ್ಯದ ಮನೆ ನಿರ್ಮಿಸುವವರಿಗೆ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿಯೇ ಕೃಷಿ ವಲಯದಿಂದ ವಸತಿ ವಲಯಕ್ಕೆ ವಲಯ ಬದಲಾವಣೆಗೆ ಅವಕಾಶ ಕಲ್ಪಿಸುವ ಅವಶ್ಯಕತೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿ ಒತ್ತಾಯಿಸಿದಾಗ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ನಗರಾಭಿವೃದ್ಧಿ ಸಚಿವರಾದ ಭೈರತಿ ಬಸವರಾಜ್ ಅವರು ನೀಡಿದ್ದರು.
ಅಲ್ಲದೆ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ವಲಯ ನಿಯಮಾವಳಿಯಲ್ಲಿ ತಿದ್ದುಪಡಿ ತರಲು ಸರ್ಕಾರಕ್ಕೆ ಸಲ್ಲಿಸಿರುವ ಪ್ರಸ್ತಾವನೆ ಬಗ್ಗೆ ಸರ್ಕಾರಿ ಭರವಸೆಗಳ ಸಮಿತಿ ಸಭೆಯಲ್ಲೂ ಚರ್ಚಿಸಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಕೃಷಿ ವಲಯದಲ್ಲಿ 10 ಸೆಂಟ್ಸ್ ಜಾಗ ಅಥವಾ ಸುಮಾರು 3000 ಚದರ ಅಡಿ ವರೆಗೆ ವಾಸ್ತವ್ಯದ ಮನೆ ನಿರ್ಮಿಸುವವರಿಗೆ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿಯೇ ಕೃಷಿ ವಲಯದಿಂದ ವಸತಿ ವಲಯಕ್ಕೆ ವಲಯ ಬದಲಾವಣೆಗೆ ಅವಕಾಶ ಕಲ್ಪಿಸುವ ಬಗ್ಗೆ ನಿರ್ಣಯ ಕೈಗೊಂಡು ಸರ್ಕಾರಕ್ಕೆ ಸಲ್ಲಿಸಲು ಸೂಚಿಸಿ ಈಗ ಬಗ್ಗೆ ತಕ್ಷಣ ಸೂಕ್ತ ಜರುಗಿಸುವಂತೆ ಅಧಿಕಾರಿಗಳಿಗೆ ತಿಳಿಸಿರುತ್ತಾರೆ.
ಇನ್ನು ಮುಂದೆ ಹತ್ತು ಸೆಂಟ್ಸ್ ವರೆಗೆ ಜಾಗದ ಭೂ ಪರಿವರ್ತನೆಗೆ ಬೆಂಗಳೂರು ಕಚೇರಿಗೆ ಅಲೆಯುವ ಪರಿಸ್ಥಿತಿ ಇಲ್ಲ. ಈ ಸಂಬಂಧ ಸುಮಾರು 4000 ಪೈಲ್ಸ್ ಗಳು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಬಾಕಿ ಇದೆ.
ಈ ಬಗ್ಗೆ ಮುಖ್ಯಮಂತ್ರಿಯವರು, ನಗರಾಭಿವೃದ್ಧಿ ಸಚಿವರು, ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ಹಾಗೂ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳ ಮಟ್ಟದಲ್ಲಿ ನಿರಂತರವಾಗಿ ಪ್ರಯತ್ನಿಸಿರುವಂತೆ ಈ ವಿಚಾರದ ಅವಶ್ಯಕತೆಯಂತೆ ಇಂದು ನಗರಾಭಿವೃದ್ಧಿ ಇಲಾಖೆ ಈ ಕರಡು ಅಧಿಸೂಚನೆ ಹೊರಡಿಸಿದೆ.
ಉಡುಪಿ ಜನತೆಯ ಪರವಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಗರಾಭಿವೃದ್ಧಿ ಸಚಿವರಾದ ಬೈರತಿ ಬಸವರಾಜ್ ಅವರಿಗೆ ಶಾಸಕ ರಘುಪತಿ ಭಟ್ ಕೃತಜ್ಞತೆ ಸಲ್ಲಿಸಿದ್ದಾರೆ.