ಮಂಗಳೂರು, ಮಾ. 30 (DaijiworldNews/SM): ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯುತ್ತಿದ್ದು, ಮಾ.30ರ ಬುಧವಾರ ದ್ವಿತೀಯ ಭಾಷೆಯ ಪರೀಕ್ಷೆ ನಡೆದಿದ್ದು, ಹಲವು ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಜಿಲ್ಲೆಯ ಏಳು ತಾಲೂಕುಗಳಲ್ಲಿ ನಡೆಯುತ್ತಿರುವ ಪರೀಕ್ಷೆಯಲ್ಲಿ ಒಟ್ಟಾರೆ 28,351 ವಿದ್ಯಾರ್ಥಿಗಳ ಪೈಕಿ 28,131 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಅವರ ಪೈಕಿ 220 ಮಂದಿ ಗೈರಾಗಿದ್ದಾರೆ.
ಯಾವುದೇ ಡಿಬಾರ್ ಪ್ರಕರಣ ವರದಿಯಾಗಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.