ಉಡುಪಿ, ಮಾ 31 (DaijiworldNews/MS): ಖಾಸಗಿಯಾಗಿ ನಿರ್ವಹಿಸುತ್ತಿದ್ದ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಸರ್ಕಾರದ ವಶಕ್ಕೆ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಐತಿಹಾಸಿಕ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
200 ಬೆಡ್ಗಳ ಆಸ್ಪತ್ರೆಗೆ ಪ್ರಸ್ತುತ ಇರುವ ಎಲ್ಲ ಸಿಬ್ಬಂದಿ ಸಹಿತ 103 ಹೆಚ್ಚುವರಿ ಸಿಬ್ಬಂದಿ ನೇಮಕಕ್ಕೆ ಹಾಗೂ ₹ 9.83 ವಾರ್ಷಿಕ ಅನುದಾನ ನೀಡುವ ಪ್ರಸ್ತಾವಕ್ಕೆ ಅನುಮೋದನೆ ನೀಡಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರಿಗೆ ಉಡುಪಿ ಜನರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ರಘುಪತಿ ಭಟ್ ತಿಳಿಸಿದ್ದಾರೆ.
ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಕಟ್ಟಡದ ಶಿಲಾನ್ಯಾಸಕ್ಕೆ ಬಂದಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಸ್ಪತ್ರೆಯನ್ನು ಸರ್ಕಾರದ ವಶಕ್ಕೆ ಪಡೆಯುವ ಬಗ್ಗೆ ಹಾಗೂ ಅತ್ಯುತ್ತಮವಾಗಿ ಭರವಸೆ ನೀಡಿದ್ದರು. ಕೊಟ್ಟ ಮಾತಿನಂತೆ ಸರ್ಕಾರ ನಡೆದುಕೊಂಡಿದೆ ಎಂದು ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.