ಮಂಗಳೂರು, ಮಾ 30 (DaijiworldNews/HR): ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿ ನವದೆಹಲಿಯಿಂದ ಹಿಂತಿರುಗಿದ ಅಮ್ಮೈ ಮಹಾಲಿಂಗ ನಾಯ್ಕರನ್ನು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಮಾ.31ರ ಗುರುವಾರ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸನ್ಮಾನಿಸಿದರು.
ನವದೆಹಲಿಯಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಅಮ್ಮೈ ಮಹಾಲಿಂಗ ನಾಯ್ಕ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ.
ಇನ್ನು ಸನ್ಮಾನ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಮಹಾಲಿಂಗ ನಾಯಕರ ಮೊಮ್ಮಗ, ಸ್ನೇಹಿತರು, ಅಭಿಮಾನಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.