ಪುತ್ತೂರು, ಏ. 02 (DaijiworldNews/SM): ದೇಶದಲ್ಲಿ ಪೆಟ್ರೋಲ್ ಬೆಲೆ ಏರಿಕೆಯ ಹಿಂದೆ ಕೇಂದ್ರ ಸರಕಾರವಿಲ್ಲ. ಈ ಹಿಂದೆ ಅಧಿಕಾರದಲ್ಲಿದ್ದ ಸರಕಾರದ ಕರ್ಮಕಾಂಡದಿಂದಾಗಿ ಬೆಲೆ ಏರಿಕೆಯಾಗಿದೆ ಎಂದು ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದ ಗೌಡ ತಿಳಿಸಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಹಿಂದಿನ ಸರಕಾರದ ತಪ್ಪು ನೀತಿಯಿಂದಾಗಿ ಇಂದು ಸಂಕಷ್ಟವುಂಟಾಗಿದೆ. ಇಂದು ತೈಲ ಕಂಪನಿಗಳೇ ತನ್ನಷ್ಟಕ್ಕೆ ಬೆಲೆ ನಿಗದಿಪಡಿಸುವಂತಾಗಿದೆ. ಅಲ್ಲದೆ, ರಷ್ಯಾ-ಉಕ್ರೇನ್ ನಡುವಿನ ಯುದ್ಧವೂ ತೈಲ ಬೆಲೆ ಏರಿಕೆಗೆ ಕಾರಣವಾಗಿದೆ. ರಷ್ಯಾದಿಂದ ತೈಲ ಆಮದು ಮಾಡುವ ಕಂಪನಿಗಳಿಗೆ ಯುದ್ಧದಿಂದ ತೊಂದರೆಯಾಗಿದೆ. ಇದರಿಂದಾಗಿ ಬೆಲೆಯಲ್ಲಿ ಈ ರೀತಿಯ ಏರಿಳಿತವಾಗುತ್ತಿದೆ ಎಂದರು.
ತೈಲ ಬೆಲೆಯನ್ನು ನಿಯಂತ್ರಣದಲ್ಲಿರಿಸಲು ಕೇಂದ್ರ ಕ್ರಮ ಕೈಗೊಳ್ಳುತ್ತಿದೆ. ಕೇಂದ್ರ ಸರಕಾರ ಕೆಲವೇ ದಿನಗಳಲ್ಲಿ ಬೆಲೆ ನಿಯಂತ್ರಣವನ್ನು ಮಾಡಲಿದೆ ಎಂದು ಪುತ್ತೂರಿನಲ್ಲಿ ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ.