ಮಂಗಳೂರು, ಏ 04 (DaijiworldNews/MS): ಜಲ ಜೀವನ್ ಮಿಷನ್ ಯೋಜನೆಯಡಿ ಪೂರ್ಣಗೊಂಡ ಕಾಮಗಾರಿಗಳಲ್ಲಿ ಯಾವುದೇ ಸಮಸ್ಯೆಗಳು ಎದುರಾದಲ್ಲೀ ತಪ್ಪಿತಸ್ಥ ಅಧಿಕಾರಿಗಳನ್ನು ಸೂಕ್ತ ಕ್ರಮಕ್ಕೆ ಒಳಪಡಿಸಲಾಗುವುದು ಎಂದು ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾದ ಕೆ.ಎಸ್. ಈಶ್ವರಪ್ಪ ಅವರು ಎಚ್ಚರಿಕೆ ನೀಡಿದರು.
ಅವರು ಏ.3ರ ಭಾನುವಾರ ನಗರದ ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪೂರ್ಣಗೊಂಡ ಕಾಮಗಾರಿಗಳನ್ನು ಪರಿಶೀಲಿಸಲು ಬೆಂಗಳೂರಿನಿAದ ತಜ್ಞರ ತಂಡವನ್ನು ಕಳುಹಿಸುವ ಕುರಿತಂತೆ ಮಾತನಾಡಿದ ಸಚಿವರು, ಆ ತಂಡವು ಪೂರ್ಣಗೊಂಡ ಕಾಮಗಾರಿಗಳ ಬಗ್ಗೆ ಸಮಪರ್ಕ ಮಾಹಿತಿ ನೀಡದಿದ್ದಲ್ಲೀ ಸಂಬAಧಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ನರೇಂದ್ರ ಬಾಬು ಅವರಿಗೆ ಸಚಿವರು ತಾಕೀತು ಮಾಡಿದರು.ಜಲಜೀವನ್ ಮಿಷನ್ ಯೋಜನೆಯ ಒಂದನೇ ಬ್ಯಾಚ್ನಡಿ ಬಂಟ್ವಾಳ ತಾಲೂಕಿನಲ್ಲಿ ಕೈಗೊಳ್ಳಲಾದ 149 ಕಾಮಗಾರಿಗಳ ಪೈಕಿ 95 ಪೂರ್ಣಗೊಂಡಿದ್ದು, 54 ಪ್ರಗತಿಯಲ್ಲಿವೆ, ಪೂರ್ಣಗೊಂಡಿರುವ ಕಾಮಗಾರಿಗಳಲ್ಲಿ ಗ್ರಾಮಸ್ಥರಿಗೆ ನೀರು ಲಭ್ಯವಾದರಷ್ಟೇ ಕಾಮಗಾರಿ ಮುಕ್ತಾಯವಾಗಿದೆ ಎಂಬುದಾಗಿರುತ್ತದೆ, ಆದ ಕಾರಣ ಆಯಾ ಗ್ರಾಮಗಳಲ್ಲಿ ಗ್ರಾಮಸ್ಥರಿಗೆ ನೀರು ಪೂರೈಕೆ ಯಾದ ಸಂಪೂರ್ಣ ಮಾಹಿತಿ ನೀಡಬೇಕು, ಆದ್ದರಿಂದ ಜಿಲ್ಲೆಯ ಎಲ್ಲಾ ತಾಲೂಕು ಪಂಚಾಯತ್ಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಂಟ್ರಾಕ್ಟರ್ಗಳೊAದಿಗೆ ಆಯಾ ಗ್ರಾಮಗಳಿಗೆ ತೆರಳಿ ಜೆಜೆಎಂ ಕಾಮಗಾರಿಗಳನ್ನು ಪರಿಶೀಲಿಸಬೇಕು, ಮುಖ್ಯವಾಗಿ ಗ್ರಾಮದ ಮಹಿಳೆಯರೊಂದಿಗೆ ಮಾತನಾಡಿ ಯೋಜನೆಯ ಫಲಶೃತಿಗಳನ್ನು ತಿಳಿದುಕೊಳ್ಳಬೇಕು, ಇಲ್ಲದಿದ್ದಲ್ಲೀ ಸಂಬAಧಿಸಿದ ತಾಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳೇ ನೇರ ಹೊಣೆ ಆಗಿರುತ್ತಾರೆ ಎಂದು ಅವರು ಎಚ್ಚರಿಕೆ ನೀಡಿದರು.
ಜೆಜೆಎಂ ಕಾಮಗಾರಿಗೆ ವೇಗ ನೀಡಬೇಕಾದ ಅಗತ್ಯವಿದೆ ಎಂದ ಸಚಿವರು, ಆರ್ಥಿಕ ಪ್ರಗತಿಯನ್ನು ಸಹ ಕೂಡಲೇ ಸಾಧಿಸಬೇಕು, ಮನೆ ಮನೆಗೆ ಗಂಗೆ ಎಂಬ ಹೆಸರಿನಡಿ ಆರಂಭಿಸಲಾದ ಜೆಜೆಎಂ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಯಾವುದೇ ರೀತಿಯ ನೆರವು ಬೇಕಿದ್ದಲ್ಲೀ ಅದನ್ನು ರಾಜ್ಯ ಸರ್ಕಾರದಿಂದ ಕೂಡಲೇ ಒದಗಿಸಲಾಗುವುದು, ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಕೂಡಲೇ ಪೂರ್ಣಗೊಳಿಸಿ ಪ್ರತಿಯೊಂದು ಗ್ರಾಮದಲ್ಲಿ ಕುಡಿಯುವ ನೀರು ಒದಗಿಸಬೇಕು ಎಂದು ಅವರು ಸೂಚನೆ ನೀಡಿದರು.
ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ನರೇಂದ್ರ ಬಾಬು ಮಾತನಾಡಿ, ಜಿಲ್ಲೆಯಲ್ಲಿ ಕೈಗೊಳ್ಳಲಾದ ಜೆಜೆಎಂನ ಮೊದಲ ಬ್ಯಾಚ್ನಲ್ಲಿ 468 ಕಾಮಗಾರಿಗಳ ಬಗ್ಗೆ 239 ಪೂರ್ಣಗೊಂಡಿದ್ದು, 229 ಪ್ರಗತಿಯಲ್ಲಿವೆ ಹಾಗೂ ಎರಡನೇ ಬ್ಯಾಚಿನಲ್ಲಿ ಬೆಳ್ತಂಗಡಿ, ಪುತ್ತೂರು, ಕಡಬ ಹಾಗೂ ಸುಳ್ಯ ತಾಲೂಕಿನಲ್ಲಿ 124 ಕಾಮಗಾರಿಗಳಲ್ಲಿ 10 ಪ್ರಗತಿಯಲ್ಲಿವೆ, 49 ಕಾಮಗಾರಿಗಳು ವಿವಿಧ ಹಂತದಲ್ಲಿವೆ ಎಂದರು.
ಜೆಜೆಎಂನ ಮೊದಲ ಹಾಗೂ ಎರಡನೇ ಬ್ಯಾಚ್ನಲ್ಲಿ ಕೈಗೊಂಡ ಕಾಮಗಾರಿಗಳನ್ನು ಪೂರ್ಣಗೊಳಿಸಿ, ಕಂಟ್ರಾಕ್ಟರ್ಗಳಿಗೆ ಹಣ ಪಾವತಿಸುವಂತೆ ಸಚಿವರು ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಮಾತನಾಡಿ, ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕಳೆದ ವರ್ಷ ಶೇ.100 ಕ್ಕೂ ಹೆಚ್ಚಿನ ಪ್ರಗತಿ ಸಾಧಿಸಲಾಗಿದೆ, 16 ಲಕ್ಷ ಮಾನವ ಉದ್ಯೋಗ ದಿನಗಳನ್ನು ಸೃಷ್ಟಿಸಲಾಗಿದೆ, ಆದ್ದರಿಂದ ಪ್ರಸಕ್ತ ಸಾಲಿನಲ್ಲಿ 2 ಲಕ್ಷ ಹೆಚ್ಚುವರಿ ಸೇರಿದಂತೆ ಒಟ್ಟು 18 ಲಕ್ಷ ಮಾನವ ಉದ್ಯೋಗ ದಿನಗಳ ಸೃಷ್ಟಿಗೆ ಗುರಿ ನಿಗದಿಗೆ ಕೋರಲಾಗಿತ್ತು, ಅದರಂತೆ ಜಿಲ್ಲೆಗೆ 18 ಲಕ್ಷ ಮಾನವ ಉದ್ಯೋಗ ದಿನಗಳ ಗುರಿ ನೀಡಲಾಗಿದೆ ಹಾಗೂ ಜಿಲ್ಲೆಯಲ್ಲಿ ಈ ಬಾರಿ 11,357 ಹೊಸ ಜಾಬ್ ಕಾರ್ಡ್ ಗಳನ್ನು ವಿತರಿಸಲಾಗಿದೆ ಎಂದರು.
ಈ ಯೋಜನೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಗ್ರಾಮೀಣ ಭಾಗದಲ್ಲಿ ಉತ್ತಮ ಆಸ್ತಿಗಳನ್ನು ಸೃಜಿಸುವಂತೆ ತಿಳಿಸಿದರು.
ಶಾಸಕರಾದ ಸಂಜೀವ ಮಠಂದೂರು, ರಾಜೇಶ್ ನಾಯ್ಕ್, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ ವೇದಿಕೆಯಲ್ಲಿದ್ದರು.ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಆನಂದ ಕುಮಾರ್ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿದ್ದರು.