ಉಡುಪಿ, ಏ. 04 (DaijiworldNews/SM): ಥರ್ಮಲ್ ಪವರ್ ಪ್ಲ್ಯಾಂಟ್ ನಲ್ಲಿ ಬೆಲೆ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ವಿದ್ಯುತ್ ದರ ಏರಿಕೆಯಾಗಿದ್ದು, ಕಲ್ಲಿದ್ದಲು ದರ ಇಳಿಕೆಯಾದಾಗ ವಿದ್ಯುತ್ ದರ ಕೂಡ ಸರಿಯಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಹೇಳಿದ್ದಾರೆ.
ಉಡುಪಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು, ಸದ್ಯ ಥರ್ಮಲ್ ಪವರ್ ಪ್ಲ್ಯಾಂಟ್ ಗಳಲ್ಲಿ ವಿದ್ಯುತ್ ಉತ್ಪಾದನೆ ನಡೆಸಲಾಗಿತ್ತಿದೆ. ಆದರೆ, ಅಲ್ಲಿ ಕಲ್ಲಿದ್ದಲು ಸೇರಿದಂತೆ ವೆಚ್ಚ ವಿಪರೀತ ಹೆಚ್ಚಳವಾಗಿದೆ. ಮುಂದೆ ಕಲ್ಲಿದ್ದಲು ಬೆಲೆ ಇಳಿಕೆಯಾದ ಸಂದರ್ಭದಲ್ಲಿ ವಿದ್ಯುತ್ ದರ ಇಳಿಕೆ ಮಾಡಲಾಗುವುದೆಂದು ಸಚಿವರು ಭರವಸೆ ನೀಡಿದ್ದಾರೆ.
ಇನ್ನು ಬಿಜೆಪಿ ಪಕ್ಷ ಸದಾ ಎಲ್ಲರಿಗೂ ಬಾಗಿಲು ತೆರೆದುಕೊಂಡಿದೆ. ಬಸವರಾಜ್ ಹೊರಟ್ಟಿಯವರು ಪಕ್ಷಕ್ಕೆ ಬಂದರೆ ಸ್ವಾಗತವಿದೆ. ಅವರಿಗೆ ಸ್ಥಾನಮಾನ ನೀಡುವ ಬಗ್ಗೆ ಪಕ್ಷ ನಿರ್ಧಾರ ಕೈಗೊಳ್ಳಲಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.