ಕೋಟ, ಏ. 04 (DaijiworldNews/SM): ಕೋಟದ ಮಣೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಚರ್ ವಾಹನ ಹಾಗೂ ದ್ವಿಚಕ್ರ ವಾಹನ ಮದ್ಯೆ ಅಪಘಾತವಾಗಿ ಓರ್ವ ಮೃತಪಟ್ಟಿದ್ದು ಮೂವರಿಗೆ ಗಂಭೀರ ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ.
ಮಂಗಳೂರಿಂದ ಕುಂದಾಪುರ ಕಡೆಗೆ ಚಲಿಸುತ್ತಿದ್ದ ಇಚರ್ ವಾಹನ ಕೋಟ ಮಣೂರು ಬೊಬ್ಬರ್ಯಕಟ್ಟೆ ಸಮೀಪ ರಾಷ್ಟ್ರೀಯ ಹೆದ್ದಾರಿ 66ರ ಮಧ್ಯೆ ಕೆಟ್ಟು ನಿಂತಿದ್ದು. ಅದೇ ದಾರಿಯಾಗಿ ಕೋಟದಿಂದ ಕುಂಭಾಶಿ ಕಡೆಗೆ ಚಲಿಸುತ್ತದ್ದ ಮೂವರು ಬೈಕ್ ಸವಾರರು ಮುಂದೆ ತೆರಳುತ್ತಿದ್ದ ಬಸ್ ನಡುವೆ ಕೆಟ್ಟು ನಿಂತ ಇಚರ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಓರ್ವ ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆ ಸಾಗಿಸುವ ಮಧ್ಯೆ ಸಾವನ್ನಪ್ಪಿದ್ದಾನೆ.
ಮೃತ ಪ್ರಸನ್ನ ದೇವಾಡಿಗ ಎಂದು ಗುರುತಿಸಲಾಗಿದೆ. ಬೈಕ್ ಸಾವರರಿಬ್ಬರು ಗಂಭೀರ ಗಾಯಗೊಂಡಿದ್ದು ಇಚರ್ ವಾಹನ ಚಾಲಕನಿಗೆ ಗಾಯಗೊಂಡಿದ್ದು ಕೋಟ ಜೀವನ್ ಮಿತ್ರ ಆಂಬುಲೆನ್ಸ್ ನಲ್ಲಿ ಭರತ್ ಗಾಣಿಗ ಅವರು ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.