ಮಂಗಳೂರು, ಏ. 05 (DaijiworldNews/SM): ಆರ್ ಎಸ್ ಎಲ್ ಮುಖಂಡ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಯಾವುದೇ ಅಪಾಯವಿಲ್ಲ ಎಂದು ವೈದ್ಯರು ದೃಢಪಡಿಸಿರುವ ಬಗ್ಗೆ ಮಾಹಿತಿ ಲಭಿಸಿದೆ.
ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್ ದೈಜಿವರ್ಲ್ಡ್ ಗೆ ಮಾಹಿತಿ ನೀಡಿದ್ದು, ರಕ್ತದೊತ್ತಡ ಪರೀಕ್ಷೆಗೆ ನಗರ ಖಾಸಗಿ ಆಸ್ಪತೆಗೆ ಡಾ. ಪ್ರಭಾಕರ್ ಭಟ್ ಅವರು ಭೇಟಿ ನೀಡಿದ್ದರು. ವೈದ್ಯರು ಪರೀಕ್ಷೆ ನಡೆಸಿ ಯಾವುದೇ ಅಪಾಯವಿಲ್ಲ ಎಂದು ತಿಳಿಸಿದ್ದಾರೆ. ಆದರೂ, ನಾಳೆಯ ತನಕ ನಿಗಾದಲ್ಲಿರುವಂತೆ ವೈದ್ಯರು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದೈಜಿವರ್ಲ್ಡ್ ಗೆ ಕಶೆಕೋಡಿ ಸೂರ್ಯನಾರಾಯಣ ಭಟ್ ತಿಳಿಸಿದ್ದಾರೆ.