ಕಾಸರಗೋಡು, ಏ 06 (DaijiworldNews/HR): ತಂದೆಯನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಆದೂರು ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿದೆ.
ಆದೂರು ಪಾಂಡಿ ವೆಳ್ಳರಿಕಯ ದ ಬಾಲಕೃಷ್ಣ ನಾಯ್ಕ್ ರವರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪುತ್ರ ನರೇಂದ್ರ ಪ್ರಸಾದ್ (27) ನನ್ನು ಬಂಧಿಸಿ ಕಾಸರಗೋಡು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು.
ಪಾನಮತ್ತರಾಗಿದ್ದ ಇಬ್ಬರ ನಡುವೆ ಜಗಳವಾಗಿ ಈ ಕೃತ್ಯ ನಡೆದಿತ್ತು. ಈ ಸಂದರ್ಭದಲ್ಲಿ ನೆಲಕ್ಕೆ ಬಿದ್ದಿದ್ದ ಬಾಲಕೃಷ್ಣ ನಾಯ್ಕ್ ಸ್ಥಳದಲ್ಲೇ ಮೃತ ಪಟ್ಟಿದ್ದರು.
ಇನ್ನು ಮೃತ ದೇಹವನ್ನು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಸಂಬಂಧಿಕರಿಗೆ ಬಿಟ್ಟು ಕೊಡಲಾಯಿತು.