ಮಂಗಳೂರು, ಏ. 06 (DaijiworldNews/SM): ನಿಯಮ ಮೀರಿ ಧ್ವನಿವರ್ಧಕ ಬಳಕೆಗೆ ತಡೆ ನೀಡಲಾಗುತ್ತಿದ್ದು, ಮಂಗಳೂರಿನಲ್ಲಿ 1001 ಸ್ಥಳಗಳಿಗೆ ನೋಟೀಸು ನೀಡಲಾಗಿದೆ ಎಂದು ಮಂಗಳೂರು ಕಮಿಷನರ್ ಎನ್. ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಕಮಿಷನರ್ ಶಶಿಕುಮಾರ್, 357 ದೇವಸ್ಥಾನ, 168 ಮಸೀದಿ, 95 ಚರ್ಚ್, 106 ಶಿಕ್ಷಣ ಸಂಸ್ಥೆಗಳು, 60 ಕೈಗಾರಿಕಾ ಸ್ಥಳಗಳು, 98 ಮನರಂಜನಾ ಸ್ಥಳ ಸೇರಿದಂತೆ 1001 ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆ ಮಾಡಲಾಗುತ್ತಿದೆ. ಇವುಗಳಲ್ಲಿ ನಿಯಮ ಪಾಲನೆ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ವಿವಿಧ ಸ್ಥಳ ಗಳಲ್ಲಿ ಧ್ವನಿವರ್ಧಕ ಬಳಕೆಗೆ ನಿಯಮವಿದೆ. ಬಹುತೇಕ ಉಲ್ಲಂಘನೆಯಾಗಿರುವ ಮಾಹಿತಿ ಇದೆ.
ಈ ಹಿನ್ನೆಲೆಯಲ್ಲಿ ಸರಕಾರ ಹಾಗೂ ಹೈಕೋರ್ಟ್ ಆದೇಶದ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಂಗಳೂರು ಕಮಿಷನರ್ ಎನ್ .ಶಶಿಕುಮಾರ್ ಮಾಹಿತಿ ನೀಡಿದ್ದಾರೆ.