ಮಂಗಳೂರು, ಏ 08 (DaijiworldNews/HR): ಅಪಘಾತ ಸಂಭವಿಸಿ ಬೆಂಕಿ ತಗುಲಿದ ಪರಿಣಾಮ ಸಿಟಿ ಬಸ್ ಹಾಗೂ ಬೈಕ್ ಹೊತ್ತಿ ಊರಿದ ಘಟನೆ ನಗರದ ಹಂಪನಕಟ್ಟೆ ಬಳಿಯ ವೆನ್ಲಾಕ್ ಆಸ್ಪತ್ರೆ ಬಳಿ ಏ.8ರ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ ಬೈಕ್ ಬಂದು ಬಸ್ಗೆ ಢಿಕ್ಕಿ ಹೊಡೆದ ಬಳಿಕ ಬೆಂಕಿ ಕಾಣಿಸಿಕೊಂಡಿದ್ದು, ಬಸ್ಸು ಹಾಗೂ ಬೈಕ್ ಎರಡು ವಾಹನಕ್ಕೂ ಬೆಂಕಿ ತಗುಲಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.
ಇನ್ನು ಅಗ್ನಿ ಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ವ್ಯಾಪಿಸುವುದನ್ನು ತಡೆದಿದ್ದು, ಖಾಸಗಿ ಬಸ್ ಬಹುಪಾಲು ಸುಟ್ಟು ಹೋಗಿದೆ. ಬೈಕ್ ಸಂಪೂರ್ಣವಾಗಿ ಸುಟ್ಟು ಹೋಗಿದೆ.
ಬಸ್ ಹೊತ್ತಿ ಉರಿದ ಕಾರಣ ರಸ್ತೆಯಲ್ಲಿ ಅರ್ಧ ತಾಸು ವಾಹನ ಸಂಚಾರ ಸ್ಥಗಿತಗೊಂಡಿದ್ದು, ದುರ್ಘಟನೆಯಲ್ಲಿ ಬೈಕ್ ಸವಾರ ಡೈಲನ್(25) ಎಂಬವರ ಕಾಲಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಇನ್ನು ಬಸ್ ನಲ್ಲಿದ್ದ ಚಾಲಕ ಸೇರಿ ಪ್ರಯಾಣಿಕರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದು, ಕಮಿಷನರ್ ಶಶಿಕುಮಾರ್ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.