ಉಡುಪಿ,ಡಿ 27 (MSP): ಮಣಿಪಾಲದ ಕೆಎಂಸಿಯ ಬಾಳಿಗಾ ಬ್ಲಾಕ್ನಲ್ಲಿ ಮಹಿಳೆಯ ಬ್ಯಾಗ್ ಕದ್ದು ಪರಾರಿಯಾಗಿದ್ದ ಆರೋಪಿಗಳನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ. ಉದ್ಯಾವರದ ಮಹಮ್ಮದ್ ಫಹಾದ್ (19) ಆರೋಪಿ ಮತ್ತೊಬ್ಬ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ.
ಬುಧವಾರ ಮಹಿಳೆಯೊಬ್ಬರು ಕೆಎಂಸಿ ಆಸ್ಪತ್ರೆ ಆವರಣದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಆರೋಪಿಗಳು ಬ್ಯಾಗ್ ಕಿತ್ತುಕೊಂಡು ಹೋಗಿದ್ದರು. ಬ್ಯಾಗ್ನಲ್ಲಿ 80000 ಮೌಲ್ಯದ ಐಫೋನ್, 2 ಎಟಿಎಂ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, 1810 ನಗದು ಇತ್ತು.
ಆರೋಪಿಗಳಿಂದ ಕದ್ದ ವಸ್ತುಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಪಲ್ಸರ್ ಬೈಕ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಎಸ್ಪಿ ಲಕ್ಷ್ಮಣ ನಿಂಬರಗಿ ಎಎಸ್ಪಿ ಕುಮಾರಚಂದ್ರ, ಡಿವೈಎಸ್ಪಿ ಜಯಶಂಕರ್ ಮಾರ್ಗದರ್ಶನದಲ್ಲಿ ಡಿಸಿಐಬಿ ಇನ್ಸ್ಪೆಕ್ಟರ್ ಕಿರಣ್, ಮಣಿಪಾಲ ಇನ್ಸ್ಪೆಕ್ಟರ್ ಸುದರ್ಶನ್, ಎಎಸ್ಎಐ ರವಿಚಂದ್ರ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.