ಉಡುಪಿ, ಏ 09 (DaijiworldNews/HR): ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ ನೂತನ ಉಪಾಧ್ಯಕ್ಷರು ಮತ್ತು ಕಾರ್ಯದರ್ಶಿಗಳ ನೇಮಕಾತಿ ಮಾಡಿ ಪಕ್ಷಾಧ್ಯಕ್ಷೆ ಸೋನಿಯಾ ಗಾಂಧಿ ಆದೇಶ ಹೊರಡಿಸಿದ್ದಾರೆ.
ಉಡುಪಿ ಜಿಲ್ಲೆಯಿಂದ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ಮತ್ತು ವಿನಯ್ ಕುಮಾರ್ ಸೊರಕೆ ಅವರನ್ನು ನೂತನ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ಇನ್ನು ದ.ಕ ಜಿಲ್ಲೆಯಿಂದ ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಮಾಜಿ ವಿಧಾನಪರಿಷತ್ ಸದಸ್ಯರಾದ ಐವಾನ್ ಡಿಸೋಜಾರನ್ನು ನೂತನ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ.