ಬೆಳ್ಮಣ್, ಏ 10 (DaijiworldNews/DB): ಟೆಂಪೋ ಮತ್ತು ಸ್ಕೂಟರ್ ಮುಖಾಮುಖಿ ಡಿಕ್ಕಿಯಾಗಿ ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಜಾರಿಗೆಕಟ್ಟೆ ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ.
ಸ್ಕೂಟರ್ ಸವಾರ ಸಚ್ಚೇರಿಪೇಟೆಯ ನಿವಾಸಿ ಗೋಪಾಲಕೃಷ್ಣ (38) ಮೃತಪಟ್ಟ ದುರ್ದೈವಿ.
ಶನಿವಾರ ರಾತ್ರಿ 10 ಗಂಟೆಯ ಸುಮಾರಿಗೆ ಮುಂಡ್ಕೂರು ಕಡೆಯಿಂದ ಮೂಡಬಿದ್ರೆಗೆ ತೆರಳುತ್ತಿದ್ದ ತರಕಾರಿ ಸಾಗಾಟದ ಟೆಂಪೊವೊಂದು, ವಿರುದ್ಧ ದಿಕ್ಕಿನಲ್ಲಿ ಬಂದ ಸ್ಕೂಟರ್ಗೆ ಡಿಕ್ಕಿ ಹೊಡೆದಿದ್ದು, ಸವಾರ ಗೋಪಾಲಕೃಷ್ಣ ರಸ್ತೆಗೆ ಎಸೆಯಲ್ಪಟ್ಟಿದ್ದರು. ಗಂಭೀರ ಗಾಯಗೊಂಡ ಅವರನ್ನು ಕಿನ್ನಿಗೋಳಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವೈದ್ಯರು ಪರೀಕ್ಷಿಸಿದಾಗ ಅವರು ಮೃತಪಟ್ಟಿರುವುದಾಗಿ ತಿಳಿದು ಬಂದಿತ್ತು.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.