ಬಂಟ್ವಾಳ, ಏ 11 (DaijiworldNews/SM): ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನಾಳೆ ಎ.12 ರಂದು ಇತಿಹಾಸ ಪ್ರಸಿದ್ಧ ದೇವಸ್ಥಾನ ಶ್ರೀ ಪೊಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.
ಪೊಳಲಿ ದೇವಾಲಯದ ಒಂದು ತಿಂಗಳ ಜಾತ್ರೋತ್ಸವದ ಕೊನೆಯ ದಿನ ರಥೋತ್ಸವದ ಸಂದರ್ಭದಲ್ಲಿ ಮುಖ್ಯ ಮಂತ್ರಿ ಬೊಮ್ಮಾಯಿ ಅವರು ದೇವರ ದರ್ಶನ ಪಡೆಯಲಿದ್ದಾರೆ. ದ.ಕ. ಮತ್ತು ಉಡುಪಿ ಜಿಲ್ಲಾ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಅವರು ಮಂಗಳವಾರ ರಾತ್ರಿ ಸುಮಾರು 8.45ರ ವೇಳೆ ಪೊಳಲಿ ದೇವಾಲಯಕ್ಕೆ ಬೇಟಿ ನೀಡಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಈ ಸಂದರ್ಭದಲ್ಲಿ ಅವರು ದೇವರ ದರ್ಶನ ಪಡೆದು ವಿಶೇಷ ಪೂಜೆಯನ್ನು ಸಲ್ಲಿಸಲಿದ್ದಾರೆ. ರಾತ್ರಿ ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಮರುದಿನ ಬುಧವಾರ ಬಂಟ್ವಾಳದ ಬಂಟರ ಭವನದಲ್ಲಿ ಬಿಜೆಪಿ ಬೈಠಕ್ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಮಧ್ಯಾಹ್ನ ದ ಬಳಿಕ ಬೆಂಗಳೂರಿಗೆ ವಾಪಾಸು ಅಗುವರು ಎಂದು ಅವರು ತಿಳಿಸಿದ್ದಾರೆ.