ಉಡುಪಿ, ಏ 13 (DaijiworldNews/SM): ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ವಿರುದ್ಧ ಪರ್ಸೆಂಟೇಜ್ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಸಂತೋಷ್ ಪಾಟೀಲ್ ಮೃತದೇಹ ಕುಟುಂಬಕ್ಕೆ ಹಸ್ತಾಂತರ ಮಾಡಲಾಗಿದೆ.
ಮಣಿಪಾಲ ಫಾರೆನ್ಸಿಕ್ ಮೆಡಿಸಿನ್ ನಲ್ಲಿ ಪೊಲೀಸರು ಮೃತದೇಹವನ್ನು ಹಸ್ತಾಂತರ ಮಾಡಿದ್ದಾರೆ. ಹವಾನಿಯಂತ್ರಿತ ಅಂಬುಲೆನ್ಸ್ ನಲ್ಲಿ ಮೃತದೇಹ ಬೆಳಗಾವಿಗೆ ರವಾನೆ ಮಾಡಲಾಗಿದೆ. ಬೆಳಗ್ಗೆ ೪ ಗಂಟೆ ಸುಮಾರಿಗೆ ಮೃತದೇಹ ಹಿಂಡಲಗಾ ತಲುಪುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.