ಉಡುಪಿ,ಡಿ 28 (MSP): ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಎಸಿಬಿ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ರಾಜ್ಯದ 17 ಕಡೆಗಳಲ್ಲಿ ಎಸಿಬಿ ದಾಳಿ ನಡೆಸಿದೆ. ಇನ್ನು ಮಂಗಳೂರಿನ ಸರ್ಕಾರಿ ಶಿಕ್ಷಕ ತರಬೇತಿ ಕೇಂದ್ರದ ರೀಡರ್ (ಪ್ರವಾಚಕರು) ಮಂಜುನಾಥ ಅವರ ಉಡುಪಿ ಮನೆಯ ಮೇಲೆ ದಾಳಿ ನಡೆಸಿದ್ದು, ಎಸಿಬಿ ಪೊಲೀಸರು ಮುಂಜಾನೆ ದಾಳಿ ನಡೆಸಿದ್ದಾರೆ. ಎಸಿಬಿ ಪಶ್ಚಿಮ ವಲಯ ಎಸ್ಪಿ ಶೃತಿ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ.
ಇವರು ವಾಸಿಸುವ ಉಡುಪಿಯ ಮಣಿಪಾಲದಲ್ಲಿ ಪ್ರಿಯದರ್ಶಿನಿ ಫ್ಲಾಟ್ ಗೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳ ತಂಡ ಪರಿಶೀಲನೆ ನಡೆಸುತ್ತಿದ್ದಾರೆ. ಇದಲ್ಲದೆ ದಾವಣೆಗೆರೆಯಲ್ಲಿರುವ ಸಂಬಂಧಿಕರ ಮನೆ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿನ ವಾಸದ ಮನೆ ಮನೆ ಮೇಲೂ ಎಸಿಬಿ ದಾಳಿ ನಡೆಸಿದೆ. ಸಾರ್ವಜನಿಕ ದೂರಿನ ಆಧಾರದಲ್ಲಿ ಎಸಿಬಿ ದಾಳಿ ನಡೆಸಿದೆ.
ಇವರು ಈ ಹಿಂದೆ ಕಾರ್ಯನಿರ್ವಹಿಸಿದ್ದ ಹುದ್ದೆಯಲ್ಲಿದ್ದಾಗ ಮಂಜುನಾಥ ಅವರ ಮೇಲೆ ಸಾಕಷ್ಟು ಭ್ರಷ್ಟಾಚಾರದ ಆರೋಪ ಕೇಳಿಬಂದಿತು . ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮಂಜುನಾಥಯ್ಯ ಅವರನ್ನು ಮಂಗಳೂರಿಗೆ ಶಿಕ್ಷಣ ಕ್ಷೇತ್ರಕ್ಕೆ ರೀಡರ್ ಅಗಿ ನೇಮಕ ಮಾಡಲಾಗಿತ್ತು .