ಬಂಟ್ವಾಳ, ಏ 16 (DaijiworldNews/HR): ಸರಕಾರದ ಮಹತ್ತರ ಯೋಜನೆಯಾದ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಅಂಗವಾಗಿ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ಅವರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉಳಿ ಗ್ರಾ.ಪಂ.ನ ಕಕ್ಯಪದವು ಸುವರ್ಣ ಸಭಾಭವನದಲ್ಲಿ ಶನಿವಾರ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತಹಶೀಲ್ದಾರ್ ರಶ್ಮಿ ಎಸ್. ಆರ್. ಅವರು, ಗ್ರಾಮೀಣ ಭಾಗದ ಜನರ ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಸರಕಾರದ ವತಿಯಿಂದ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಪ್ರತೀ ತಿಂಗಳ ಮೂರನೇ ಶನಿವಾರ ನಡೆಸಲಾಗುತ್ತಿದೆ.ಈ ಸಂದರ್ಭದಲ್ಲಿ ಎಲ್ಲ ತಾಲೂಕು ಮಟ್ಟದ ಅಽಕಾರಿಗಳು ಗ್ರಾಮಗಳಿಗೆ ತೆರಳುವುದರಿಂದ ಸಾರ್ವಜನಿಕರ ಸಮಸ್ಯೆಗಳನ್ನು ನೇರವಾಗಿ ಆಲಿಸಿ, ಸಾಧ್ಯವಿದ್ದಲ್ಲಿ ಸ್ಥಳದಲ್ಲೇ ಪರಿಹರಿಸಲು ಸಾಧ್ಯವಾಗುತ್ತದೆ. ಸಾರ್ವಜನಿಕರು ಇಲಾಖೆಗಳಿಗೆ ಅಲೆದಾಡುವುದು ತಪ್ಪುತ್ತದೆ ಎಂದು ಹೇಳಿದರು.
ಉಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುರೇಶ್ ಮೈರ, ಉಪಾಧ್ಯಕ್ಷ ಚಿದಾನಂದ ರೈ, ಭೂನ್ಯಾಯ ಮಂಡಳಿ ಸದಸ್ಯ ರಂಜಿತ್ ಮೈರ, ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ಕೇಂದ್ರ ಸ್ಥಾನೀಯ ಶಿರಸ್ತೇದಾರ್ ನರೇಂದ್ರನಾಥ್ ಮಿತ್ತೂರು, ಪಂಚಾಯತ ಅಭಿವೃದ್ಧಿ ಅಽಕಾರಿ ಧನಂಜಯ, ಪ್ರಥಮ ದರ್ಜೆ ಸಹಾಯಕಿ ಗ್ರೆಟ್ಟಾ ಮಸ್ಕರೇನ್ಹಸ್, ಕಂದಾಯ ನಿರೀಕ್ಷಕ ಸಂತೋಷ್, ಗ್ರಾಮ ಲೆಕ್ಕಾಧಿಕಾರಿ ನಿಶ್ಮಿತಾ,ಉಳಿ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
ಉಪತಹಶೀಲ್ದಾರ್ ನವೀನ್ ಬೆಂಜನಪದವು ಸ್ವಾಗತಿಸಿ, ವಂದಿಸಿದರು. ಗ್ರಾಮಸ್ಥರ ಅಹವಾಲುಗಳನ್ನು ಸ್ವೀಕರಿಸಿ ಸ್ಥಳದಲ್ಲಿಯೇ ಪರಿಹಾರ ಸೂಚಿಸಲಾಯಿತು.