ಪುತ್ತೂರು, ಏ 17 (DaijiworldNews/HR): ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ನಡೆಯುತ್ತಿರುವ ಜಾತ್ರೋತ್ಸವದ ಜಾತ್ರಾಗದ್ದೆಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳು ಬಿಕ್ಷಾಟನೆ ನಡೆಸುತ್ತಿರುವ ಮಾಹಿತಿ ತಿಳಿದ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಇತರ ಇಲಾಖೆಯ ಅಧಿಕಾರಿಗಳು ಇಬ್ಬರು ಅಪ್ರಾಪ್ತ ಮಕ್ಕಳನ್ನು ರಕ್ಷಣೆ ಮಾಡಿ ಅವರಿಗೆ ಪುನರ್ವಸತಿ ಕಲ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.
ಸಾಂದರ್ಭಿಕ ಚಿತ್ರ
ಜಾತ್ರಾ ಗದ್ದೆಯಲ್ಲಿ ಅಪ್ರಾಪ್ತ ಮಕ್ಕಳು ಬಿಕ್ಷಾಟನೆ ಮಾಡುವ ಬಗ್ಗೆ ಜಿಲ್ಲಾ ಮಕ್ಕಳ ಕಲ್ಯಾಣ ಘಟಕಕ್ಕೆ ದೂರು ಬಂದಿರುವ ಹಿನ್ನಲೆಯಲ್ಲಿ ಘಟಕದ ಸಿಬ್ಬಂದಿಗಳು, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಮಹಿಳಾ ಪೊಲೀಸ್ ಠಾಣೆಯ ಸಿಬ್ಬಂದಿಗಳ ಸಹಕಾರದಲ್ಲಿ ಜಾತ್ರಾಗದ್ದೆಯಲ್ಲಿ ಕಾರ್ಯಾಚರಣೆ ನಡೆಸಿ ಮಕ್ಕಳನ್ನು ರಕ್ಷಿಸಿ ಪೋಷಕರಿಗೆ ಎಚ್ಚರಿಕೆ ನೀಡಿದ್ದಾರೆ.
ಕಾರ್ಯಾಚರಣೆಯಲ್ಲಿ ಚೈಲ್ಡ್ ಲೈನ್ ಕೇಂದ್ರದ ಸಂಯೋಜಕ ದೀಕ್ಷಿತ್ ಅಚ್ರಪ್ಪಾಡಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳಾದ ಕುಮಾರ್ ಶೆಟ್ಟಿಗಾರ್ ಮತ್ತು ವಝೀರ್, ಆಪ್ತ ಸಮಾಲೋಚಕಿ ಪ್ರತಿಮಾ ಹಾಗೂ ಮತ್ತಿತರರು ಭಾಗವಹಿಸಿದ್ದರು.