ಕಾಸರಗೋಡು, ಏ 18 (DaijiworldNews/HR): ಪುತ್ತಿಗೆ ಗ್ರಾಮ ಪಂಚಾಯತ್ನ ಅನೋಡಿ ಪಳ್ಳ ಜಲ ಸಂರಕ್ಷಣಾ ಯೋಜನೆಯನ್ನು ಸೋಮವಾರ ಕೇರಳ ಬಂದರು ಖಾತೆ ಸಚಿವ ಅಹಮ್ಮದ್ ದೇವರ್ ಕೋವಿಲ್ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಅವರು, ಈ ಯೋಜನೆಯಿಂದ ಪ್ರದೇಶದ ಜನತೆಗೆ ಅನುಕೂಲವಾಗಲಿದ್ದು, ಇಂತಹ ನೀರು ಸಂರಕ್ಷಣಾ ಯೋಜನೆಗಳು ರಾಜ್ಯದಲ್ಲಿ ಅನುಷ್ಠಾನಕ್ಕೆ ತರಬೇಕಿದೆ. ಜಿಲ್ಲಾಡಳಿತ ಹಾಗೂ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇತೃತ್ವದಲ್ಲಿ ಈ ಯೋಜನೆ ಜಾರಿಗೆ ತರಲಾಗಿದೆ ಎಂದರು.
ಶಾಸಕ ಎ.ಕೆ.ಎಂ.ಅಶ್ರಫ್ ಅಧ್ಯಕ್ಷತೆ ವಹಿಸಿದ್ದರು. ಸಂಸದ ರಾಜಮೋಹನ್ ಉಣ್ಣಿ ತ್ತಾನ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಪಿ ಬೇಬಿ ಬಾಲಕೃಷ್ಣನ್, ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣವೀರಚಂದ್, ಎಚ್ಎಎಲ್ ಎಜಿಎಂ ಎಎಸ್ ಸಾಜಿ, ಪುತ್ತಿಗೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಜಯಂತಿ, ಜಿಲ್ಲಾ ಪಂಚಾಯಿತಿ ಸದಸ್ಯ ನಾರಾಯಣ ನಾಯ್ಕ್, ಪುತ್ತಿಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಪಾಲಾಕ್ಷ ರೈ, ಮಂಜೇಶ್ವರ ಬ್ಲಾಕ್ ಪಂಚಾಯಿತಿ ಸದಸ್ಯೆ ಕೆ ಚಂದ್ರಾವತಿ ಪಂಚಾಯಿತಿ ಜಯಂತಿ, ಪುತ್ತಿಗೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ರಾಜೇಶ್ವರಿ, ಪುತ್ತಿಗೆ ಕೃಷಿ ಅಧಿಕಾರಿ ನಫೀಸತ್ ಹಂಸೀನಾ, ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಪಿ.ಇಬ್ರಾಹಿಂ, ಸುಲೈಮಾನ್ ಉಜಂಪಾಡಿ, ಎಂ.ಅಬ್ದುಲ್ಲಾ, ಸುನೀಲ್ ಅನಂತಪುರ, ಮನೋಹರನ್, ಜಿಲ್ಲಾ ಮಣ್ಣು ಸಂರಕ್ಷಣಾಧಿಕಾರಿ ವಿ.ಎಂ.ಅಶೋಕ್ ಕುಮಾರ್, ಎಚ್ ಎಎಲ್ ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕ ಮುರಳಿ ಕೃಷ್ಣ ಉಪಸ್ಥಿತರಿದ್ದರು.
ಪುತ್ತಿಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಡಿ.ಸುಬ್ಬಣ್ಣ ಆಳ್ವ ಸ್ವಾಗತಿಸಿ, ಜಿಲ್ಲಾ ಹಣಕಾಸು ಅಧಿಕಾರಿ ಶಿವ ಪ್ರಕಾಶ್ ನಾಯರ್ ವಂದಿಸಿದರು.