ಸುಳ್ಯ, ಏ 19 (DaijiworldNews/HR): ಡಿ.ಕೆ. ಶಿವಕುಮಾರ್ ಅವರನ್ನು ನಿಂದಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ನ್ಯಾಯಾಲಯವು ಆರೋಪಿಗೆ ಜೈಲು ಶಿಕ್ಷೆ ನೀಡಿ ತೀರ್ಪು ಪ್ರಕಟಿಸಿದೆ.
ಡಿ.ಕೆ. ಶಿವಕುಮಾರ್ ಅವರು 2016ರಲ್ಲಿ ಇಂಧನ ಸಚಿವರಾಗಿದ್ದ ವೇಳೆ ನಿಂದಿಸಿದ್ದ ಸುಳ್ಯ ತಾಲೂಕಿನ ಬೆಳ್ಳಾರೆಯ ಗಿರಿಧರ್ ರೈ ಎಂಬವರಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿ ಸುಳ್ಯ ನ್ಯಾಯಾಲಯದ ನ್ಯಾಯಾಧೀಶ ಸೋಮಶೇಖರ್ ಅವರು ತೀರ್ಪು ನೀಡಿದ್ದಾರೆ.
ಗಿರಿಧರ್ ರೈ ಅವರು 2016ರ ಫೆಬ್ರವರಿ 28ರಂದು ಅಂದಿನ ಇಂಧನ ಸಚಿವ ಡಿಕೆಶಿ ಅವರಿಗೆ ವಿದ್ಯುತ್ ಸಮಸ್ಯೆ ಹೇಳಿಕೊಳ್ಳಲು ಕರೆ ಮಾಡಿದ್ದು, ಈ ವೇಳೆ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು.
ಇನ್ನು ಅಂದಿನ ಮೆಸ್ಕಾಂ ಎಂಡಿ ಮೂಲಕ ಗಿರಿಧರ್ ರೈ ವಿರುದ್ಧ ಡಿ.ಕೆ. ಶಿವಕುಮಾರ್ ಪೊಲೀಸ್ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡಡಿದ್ದ ಪೊಲೀಸರು ರಾತ್ರೋರಾತ್ರಿ ಗಿರಿಧರ್ ರೈನನ್ನು ಬಂಧಿಸಿದ್ದರು.
ಈ ಕುರಿತಾಗಿ ಸಾಕ್ಷಿ ಹೇಳಲು ಸುಳ್ಯ ಕೋರ್ಟ್ ಡಿ.ಕೆ. ಶಿವಕುಮಾರ್ ಅವರಿಗೆ ಮೂರು ಬಾರಿ ಸಮಸ್ಸ್, ಒಂದು ಬಾರಿ ವಾರೆಂಟ್ ಜಾರಿ ಮಾಡಿದ್ದು, ಈ ಹಿನ್ನೆಲೆಯಲ್ಲಿ ಡಿಕೆಶಿ ಅವರು 2021ರ ಸೆ.29ರಂದು ಸುಳ್ಯ ಕೋರ್ಟ್ಗೆ ಹಾಜರಾಗಿ, ವಿಚಾರಣೆ ಎದುರಿಸಿದ್ದು, ಇದೀಗ ಸೋಮವಾರ ಮತ್ತೆ ವಿಚಾರಣೆ ನಡೆಸಿದ ಕೋರ್ಟ್ ಗಿರಿಧರ್ ರೈ ಅವರಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದೆ.