ಮಂಗಳೂರು, ಏ 19 (DaijiworldNews/SM): ಎಸ್ ಇ ಝಡ್ ವ್ಯಾಪ್ತಿಯ ಫಿಶ್ ಮಿಲ್ ನಲ್ಲಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪೆನಿಯವರು ಹಲವಾರು ನಿಯಮಗಳನ್ನು ಉಲ್ಲಂಘನೆ ಮಾಡಿರುವುದು ಬೆಳಕಿಗೆ ಬಂದಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದ್ದಾರೆ.
ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು, ಕಂಪೆನಿಯವರು ಬಾಲ ಕಾರ್ಮಿಕರನ್ನು ಕೂಡ ಬಳಸಿರುವ ಬಗ್ಗೆಯೂ ಶಂಕೆ ವ್ಯಕ್ತವಾಗಿದೆ. ಕಾರ್ಮಿಕರ ಬಗ್ಗೆಯೂ ಕೂಡ ಯಾವುದೇ ನೋಂದಾವಣಿ ಇಲ್ಲ. ಸರಕಾರಕ್ಕೆ ಸರಿಯಾದ ಮಾಹಿತಿ ನೀಡದೆ ಕೆಲಸ ಮಾಡುತ್ತಿರುವುದು ಪತ್ತೆಯಾಗಿದೆ. ಜಿಲ್ಲೆಯಲ್ಲಿರುವ ಇತರ ಫಿಶ್ ಮಿಲ್ ಗಳಿಗೆ ನೋಟೀಸ್ ಜಾರಿಗೊಳಿಸಲಾಗಿದೆ. ನಿಯಮ ಪಾಲನೆಯ ಬಗ್ಗೆ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದ್ದಾರೆ.