ಮಂಗಳೂರು, ಏ 22 (DaijiworldNews/MS): ವರ್ಷದ ಹಿಂದೆ ನಡೆದ ಘಟನೆಯೊಂದು ಬೆಳಕಿಗೆ ಬಂದ ಹಿನ್ನಲೆಯಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ವೇಲೆನ್ಸಿಯಾ ನಿವಾಸಿಯಾಗಿದ್ದು, ವರ್ಷದ ಹಿಂದೆ ಅಪ್ರಾಪ್ತ ಬಾಲಕಿ ಮತ್ತು ಆತನ ನಾಲ್ವರು ಸ್ನೇಹಿತರ ಜೊತೆ ಪಾರ್ಟಿ ಮಾಡಿದ್ದ. ಇದೀಗ ಇದೇ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವಿಡಿಯೋ ನೋಡಿದ ಬಾಲಕಿಯ ಪೋಷಕರು ಅಪ್ರಾಪ್ತ ಬಾಲಕಿಯನ್ನು ವಿಚಾರಿಸಿದಾಗ ಲೈಂಗಿಕ ಕಿರುಕುಳವನ್ನು ಬಹಿರಂಗಪಡಿಸಿದ್ದಾಳೆ. ಅದರಂತೆ ಪೊಲೀಸರಿಗೆ ದೂರು ನೀಡಿದ್ದರು.
ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.