ದ.ಕ / ಉಡುಪಿ, ಏ 22 (DaijiworldNews/MS): ಇಂದಿನಿಂದ ಮೇ 18ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಈ ಹಿನ್ನಲೆ ಅವಿಭಜಿತ ಜಿಲ್ಲೆಯ ಪರೀಕ್ಷಾ ಕೇಂದ್ರಗಳತ್ತ ವಿದ್ಯಾರ್ಥಿಗಳು ಆಗಮಿಸುತ್ತಿದ್ದಾರೆ.
ಉಡುಪಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 31,308 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಜಿಲ್ಲೆಯ 12 ಸರಕಾರಿ, 23 ಅನುದಾನಿತ ಮತ್ತು 16 ಅನುದಾನ ರಹಿತ ಕಾಲೇಜುಗಳ ಸಹಿತ ಒಟ್ಟು 51 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.15,652 ಬಾಲಕರು ಹಾಗೂ 15,656 ಬಾಲಕಿಯರು ಪರೀಕ್ಷೆ ಬರೆಯಲಿದ್ದಾರೆ. ಈ ಪೈಕಿ ಕಲಾ ವಿಭಾಗದಲ್ಲಿ 4,329, ವಾಣಿಜ್ಯ ವಿಭಾಗದಲ್ಲಿ 14,987 ಹಾಗೂ ವಿಜ್ಞಾನ ವಿಭಾಗದಲ್ಲಿ 11,992 ವಿದ್ಯಾರ್ಥಿಗಳಿದ್ದಾರೆ.
ದಕ್ಷಿಣ ಕನ್ನಡ
ಉಡುಪಿ ಜಿಲ್ಲೆಯ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ನಡೆಯಲಿದೆ.14,597 ಹೊಸ, 326 ಖಾಸಗಿ ಮತ್ತು 349 ಪುನರಾವರ್ತಿತ ಅಭ್ಯರ್ಥಿಗಳು ಸೇರಿ 15,272 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ ವಿಜ್ಞಾನ ವಿಭಾಗದ 2,203 ಹುಡುಗರು, 2,589 ಹುಡುಗಿಯರು, ವಾಣಿಜ್ಯ ವಿಭಾಗದ 3,935 ಹುಡುಗರು, 3,915 ಹುಡುಗಿಯರು, ಕಲಾ ವಿಭಾಗದ 796 ಹುಡುಗರು, 728 ಹುಡುಗಿಯರು ಪರೀಕ್ಷೆ ಬರೆಯಲಿದ್ದಾರೆ. ಒಟ್ಟಾರೆಯಾಗಿ ವಿಜ್ಞಾನ ವಿಭಾಗದ 4,792, ವಾಣಿಜ್ಯ ವಿಭಾಗದ 7,850 ಹಾಗೂ ಕಲಾ ವಿಭಾಗದ 1,524 ವಿದ್ಯಾರ್ಥಿಗಳು ಇದ್ದಾರೆ.
ಹಿಜಾಬ್ಗಾಗಿ ಹೋರಾಟ ನಡೆಸುತ್ತಿರುವ ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ 6 ವಿದ್ಯಾರ್ಥಿನಿಯರು ದ್ವಿತೀಯ ಪಿಯುಸಿ ಪರೀಕ್ಷೆಗೆ ಪ್ರವೇಶ ಪತ್ರವನ್ನು ಪಡೆದುಕೊಂಡಿಲ್ಲ ಇವರಿಗೆ ಕೊನೆ ಕ್ಷಣದವರೆಗೂ ಅವಕಾಶ ಎಂದು ಕಾಲೇಜಿನ ಪ್ರಾಂಶುಪಾಲ ರುದ್ರೇಗೌಡ ಈ ಹಿಂದೆ ತಿಳಿಸಿದ್ದರು.
6 ವಿದ್ಯಾರ್ಥಿಗಳ ಪೈಕಿ ಇಬ್ಬರು ವಿದ್ಯಾರ್ಥಿನಿಯರು ಇಂದು ಪರೀಕ್ಷೆ ಎದುರಿಸಬೇಕಾಗಿತ್ತು. ಈ ಪೈಕಿ ವಿದ್ಯಾರ್ಥಿನಿ ಅಲಿಯಾ ಅಸದಿ ಪರೀಕ್ಷೆ ಆರಂಭವಾಗುವ ಕೆಲವೇ ಕ್ಷಣಗಳ ಹಿಂದೆ ಪ್ರವೇಶಪತ್ರ ಪಡೆದುಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ಹಿಜಾಬ್ ಹೋರಾಟದ ಮುಂಚೂಣಿಯಲ್ಲಿ ಆಲಿಯಾ ಅಸಾದಿ ಹೆಸರುಕೇಳಿಬಂದಿತ್ತು