ಉಡುಪಿ, ಏ 22 (DaijiworldNews/SM): ಹಿಜಾಬ್ ಗೆ ಅವಕಾಶ ನಿರಾಕರಣೆ ಹಿನ್ನೆಲೆಯಲ್ಲಿ ಇಂದು ಉಡುಪಿಯಲ್ಲಿ ಕೋರ್ಟ್ ಮೊರೆ ಹೋಗಿದ್ದ ಇಬ್ಬರು ವಿದ್ಯಾರ್ಥಿನಿಯರು ಪರೀಕ್ಷೆ ಬರೆಯದೆ ವಾಪಸಾಗಿದ್ದಾರೆ. ವಿದ್ಯಾರ್ಥಿನಿಯರನ್ನು ಪ್ರಚೋದಿಸಿ ಗಲಭೆ ಸೃಷ್ಠಿಸುವ ಹುನ್ನಾರ ನಡೆಸಲಾಗುತ್ತಿದೆ ಎಂದು ಹಿಂದೂ ಜಾಗರಣ ವೇದಿಕೆ ಆರೋಪಿಸಿದೆ.
ಕೆಲ ಮತೀಯ ಸಂಘಟನೆಗಳ ನೇತೃತ್ವದಲ್ಲಿ ಗಲಭೆಯ ಹುನ್ನಾರ ನಡೆಯುತ್ತಿದೆ. ಉಡುಪಿ ಜಿಲ್ಲಾ ಹಿಂದೂ ಜಾಗರಣ ವೇದಿಕೆ ಇದನ್ನು ಗಂಭೀರವಾಗಿ ಪರಿಗಣಿಸಿದೆ. ನಾಳೆ ಮತ್ತದೇ ಹೈಡ್ರಾಮ ನಡೆಸಿದರೆ ಹಿಂಜಾವೇಯಿಂದ ಇದಕ್ಕೆ ತಕ್ಕ ಪ್ರತಿಕ್ರಿಯೆ ನೀಡಲಾಗುವುದು. ಯಾವುದೇ ಪ್ರತಿಕ್ರಿಯೆಗಳಿಗೆ ಇಲಾಖೆ ಮತ್ತು ಜಿಲ್ಲಾಡಳಿತ ಹೊಣೆ ಎಂದು ಉಡುಪಿ ಹಿಂದೂ ಜಾಗರಣ ವೇದಿಕೆ ತಿಳಿಸಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ಗಳನ್ನು ಹರಿ ಬಿಡಲಾಗುತ್ತಿದೆ.