ಮಂಗಳೂರು, ಏ 25 (DaijiworldNews/SM): ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಸೋಮವಾರ ನಡೆದ ಅರ್ಥಶಾಸ್ತ್ರ ಪರೀಕ್ಷೆಗೆ ೫೪೬ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಅರ್ಥಶಾಸ್ತ್ರ ವಿಷಯದ ಪರೀಕ್ಷೆಗೆ 17395 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಆದರೆ, ಈ ಪೈಕಿ 16849 ವಿದ್ಯಾರ್ಥಿಗಳು ಮಾತ್ರ ಪರೀಕ್ಷೆಗೆ ಹಾಜರಾಗಿದ್ದಾರೆ. ಉಳಿದ 546 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಗೌರು ಹಾಜರಾಗಿದ್ದಾರೆ ಎಂದು ದ.ಕ. ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ.