ಮಂಗಳೂರು, 27 (DaijiworldNews/MS): ಸಿಎಂ ಬಸವರಾಜ ಬೊಮ್ಮಾಯಿ ನಿರಂತರವಾಗಿ ಜಿಲ್ಲಾ ಪ್ರವಾಸದಲ್ಲಿ ತೊಡಗಿದ್ದು, ವಿಜಯಪುರ ಪ್ರವಾಸದ ಬಳಿಕ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ.
ಮಂಗಳೂರಿನಿಂದಲೇ ಪಿಎಂ ವೀಡಿಯೋ ಕಾನ್ಫ್ರೆನ್ಸ್ನಲ್ಲಿ ಭಾಗಿ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಏ. 27ರ ಬುಧವಾರ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನಡೆಸಲಿರುವ ವಿಡಿಯೋ ಕಾನ್ಫ್ರೆನ್ಸ್ನಲ್ಲಿ ಭಾಗಿಯಾಗಲಿರುವ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯದ ಕೊವೀಡ್ ಸ್ಥಿತಿಗತಿ ಬಗ್ಗೆ ಮಾಹಿತಿ ನೀಡಲಿದ್ದಾರೆ. ನಾಲ್ಕನೇ ಅಲೆ ನಿಯಂತ್ರಣ ಬಗ್ಗೆ ಮತ್ತು ಮುಂಜಾಗ್ರತಾ ಕ್ರಮಗಳ ಕುರಿತು ಪಿಎಂ ಜೊತೆ ಸಿಎಂ ಬೊಮ್ಮಾಯಿ ಸಮಾಲೋಚನೆ ನಡೆಸಲಿದ್ದಾರೆ..
ಜಿಲ್ಲೆಯ ಜಿಲ್ಲಾ ಪಂಚಾಯತ್ನಲ್ಲಿ ನಡೆಯುವ ಈ ವಿಡಿಯೋ ಸಂವಾದದಲ್ಲಿ ಜಿಲ್ಲಾ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿಗಳು ಭಾಗವಹಿಸಲಿದ್ದು. ಜಿಲ್ಲಾ ಪಂಚಾಯತ್ನಲ್ಲಿ ಈ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್ ತಿಳಿಸಿದ್ದಾರೆ.
ಇಂದು ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಗೆ ಭೇಟಿ ನೀಡಲಿರುವ ಸಿಎಂ ಬೊಮ್ಮಾಯಿ, ಅಲ್ಲಿ ಅನ್ನದಾಸೋಹ ಕಟ್ಟಡದ ಉದ್ಘಾಟನೆ ಮಾಡಲಿದ್ದಾರೆ. ಬಳಿಕ ಜೈನ್ ಬಸದಿಗೆ ಭೇಟಿ ಕೊಡಲಿದ್ದು, ಮಧ್ಯಾಹ್ನ 1ಗಂಟೆಗೆ ಮೂಡಿಬಿದರೆ ಪ್ರೆಸ್ ಕ್ಲಬ್ನಲ್ಲಿ ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ಮೂಡಬಿದಿರೆ ತಾಲೂಕು ಆಡಳಿತಸೌಧ ಉದ್ಘಾಟನೆ ಹಾಗೂ ಮುಲ್ಕಿ ವಿಧಾನಸಭೆ ಕ್ಷೇತ್ರದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಸಂಜೆ 5.30ಕ್ಕೆ ಮೂಡುಬಿದಿರೆಯಿಂದ ಹೊರಟು ರಾತ್ರಿ 7.45ಕ್ಕೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.