ವಿಟ್ಲ, ಏ 27 (DaijiworldNews/DB): ಸಭಾಭವನದಲ್ಲಿ ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಕೆಳಕ್ಕೆ ಬಿದ್ದು ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ವಿಟ್ಲದಲ್ಲಿ ನಡೆದಿದೆ.
ಲಕ್ನೋ ಮೂಲದ ಜಯ ಪ್ರಕಾಶ್ (25) ಮೃತ ವ್ಯಕ್ತಿ.
ವಿಟ್ಲ ಶೋಕಮಾತೆ ಇಗರ್ಜಿಯ ಅಧೀನಕ್ಕೊಳಪಟ್ಟ ಸಭಾಭವನದಲ್ಲಿ ಎ.26ರಂದು ಸಂಜೆ ಈತ ಕೆಲಸ ಮಾಡುತ್ತಿದ್ದ ವೇಳೆ ಘಟನೆ ನಡೆದಿದೆ. ತತ್ಕ್ಷಣ ಆತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಶವವನ್ನು ಸ್ವಗ್ರಾಮಕ್ಕೆ ಕಳುಹಿಸಿಕೊಡುವ ವ್ಯವಸ್ಥೆ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.