ಪುತ್ತೂರು, ಮೇ 01 (DaijiworldNews/HR): ಹಲವು ಪ್ರಕರಣದ ಆರೋಪಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಇದೀಗ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕಾಸರಗೋಡು ತಾಲೂಕಿನ ಚಟ್ಟಂಗಲ್ ಗ್ರಾಮದ ನಿವಾಸಿ ಮಹಮ್ಮದ್ ಕಬೀರ್ ಎಂದು ಗುರುತಿಸಲಾಗಿದ್ದು, ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಇನ್ನು ಆರೋಪಿಯು ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಆರೋಪಿ ಬಂಧನಕ್ಕೆ ನ್ಯಾಯಾಲಯ ವಾರೆಂಟ್ ಹೊರಡಿಸಿದ್ದು, ಇದೀಗ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಆರೋಪಿ ವಿರುದ್ಧ ಪುತ್ತೂರು ನಗರ ಠಾಣೆ, ಸುಳ್ಯ,ಮಡಿಕೇರಿ, ಕೇರಳ ಠಾಣಾ ವ್ಯಾಪ್ತಿಯಲ್ಲಿ ವಿವಿಧ ಪ್ರಕರಣಗಳು ದಾಖಲಾಗಿವೆ.