ತಿರುವನಂತಪುರ,ಜ 02(MSP): 50 ವರ್ಷದ ಒಳಗಿನ ಮಹಿಳೆಯರು ಶಬರಿಮಲೆ ದೇಗುಲಕ್ಕೆ ಪ್ರವೇಶ ಮಾಡಿರುವುದನ್ನು ವಿರೋಧಿಸಿರುವ ಬಿಜೆಪಿಯು ಪಕ್ಷವೂ ರಾಜ್ಯದ ಹಲವೆಡೆ ಪ್ರತಿಭಟನೆ ನಡೆಸುತ್ತಿದ್ದು, ಗುರುವಾರ ರಾಜ್ಯದಾದ್ಯಂತ ಹರತಾಳಕ್ಕೆ ಕರೆಕೊಟ್ಟಿದೆ.ಕೊಚ್ಚಿ, ತಿರುವನಂತಪುರಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ಪಕ್ಷದ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಿರುವನಂತಪುರದಲ್ಲಿ ಸಚಿವಾಲಯಕ್ಕೆ ನುಗ್ಗಲು ಯತ್ನಿಸಿದ ಬಿಜೆಪಿ ಮಹಿಳಾ ಮೋರ್ಚಾದ ಐವರು ಸದಸ್ಯೆಯರನ್ನು ಪೊಲೀಸರು ತಡೆದಿದ್ದಾರೆ.
ಇನ್ನೊಂದೆಡೆ ಶಬರಿಮಲೆ ದೇಗುಲವನ್ನು ಪ್ರವೇಶಿಸಿದ ಬಿಂದು ಮತ್ತು ಕನಕದುರ್ಗ ಅವರ ವಿರುದ್ದ ವ್ಯಾಪಕ ಆಕ್ರೋಶ ವ್ಯಾಪಕವಾಗಿದ್ದು ಈ ಹಿನ್ನಲೆಯಲ್ಲಿ ಅವರಿಗೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದ್ದು, ಇಬ್ಬರನ್ನು ಸುರಕ್ಷಿತ ಸ್ಥಳದಲ್ಲಿರಿಸಲಾಗಿದೆ. ಇದಲ್ಲದೆ ಕೋಝಿಕೋಡ್ನ ಕೊಯಿಲಾಂಡಿಯಲ್ಲಿರುವ ಬಿಂದು ನಿವಾಸ ಮತ್ತು ಮಲಪ್ಪುರಂನಲ್ಲಿರುವ ಅಂಗಡಿಪ್ಪುರಂನಲ್ಲಿರುವ ಕನಕದುರ್ಗ ನಿವಾಸದ ಮೇಲೆ ದಾಳಿ ನಡೆಸುವ ಎಲ್ಲಾ ಸಾಧ್ಯತೆಗಳಿರುವ ಹಿನ್ನಲೆಯಲ್ಲಿ ಕಾವಲಿಗೆ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ.