ಮಂಗಳೂರು,ಜ 02(MSP):ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿಕೆಟ್ ನೀಡುವಂತೆ ಕಣಚೂರು ಮೋನು ಹಾಜಿ ಅವರು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಗೆ ಜ.2 ರ ಬುಧವಾರ ಮನವಿಯನ್ನು ಸಲ್ಲಿಸಿದರು.
ಕಣಚೂರು ಮೋನು ಹಾಜಿ ಸುಮಾರು 48 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾದ್ದರು. ಕಾಂಗ್ರೆಸ್ ಪಕ್ಷದ ವಿವಿಧ ಹುದ್ದೆಯನ್ನು ನಿರ್ವಹಿಸಿದ ಅನುಭವ ಹೊಂದಿದ ಇವರು ಪಕ್ಷದ ಏಳಿಗೆಗಾಗಿ ಇವರು ಶ್ರಮಿಸಿದ್ದಾರೆ ಜಿಲ್ಲೆಯಲ್ಲಿ ಉದ್ಯಮಿಯಾಗಿ ಹೆಸರುವಾಸಿಯಾಗಿರುವ ಇವರು ಪ್ರಸ್ತುತ ಕಣಚೂರು ಮೆಡಿಕಲ್ ಕಾಲೇಜಿನ ಅಧ್ಯಕ್ಷರಾಗಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.