ಪುತ್ತೂರು, ಮೇ 03 (DaijiworldNews/HR): ತಾಲೂಕಿನ ಕೆದಿಲ ಗ್ರಾಮದ ಸತ್ತಿಕಲ್ಲುಬೈಲು ಬಳಿ ಅಕ್ರಮ ಕಸಾಯಿಖಾನೆ ನಡೆಸುತ್ತಿದ್ದ ಓರ್ವನನ್ನು ಪೊಲೀಸರು ಬಂಧಿಸಿ 30ರಿಂದ 40 ಕೆಜಿ ಗೋಮಾಂಸವನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
ಬಂಧಿತನನ್ನು ಸತ್ತಾರ್ ಎಂದು ಗುರುತಿಸಲಾಗಿದೆ.
ಅಕ್ರಮ ಕಸಾಯಿಖಾನೆ ನಡೆಯುತ್ತಿರುವ ಸ್ಥಳದ ಬಗ್ಗೆ ಹಿಂದೂ ಜಾಗರಣ ವೇದಿಕೆ ಸದಸ್ಯರು ಪೊಲೀಸರಿಗೆ ಸುಳಿವು ನೀಡಿದ್ದಾರೆ.
ಈ ಬಗ್ಗೆ ಪುತ್ತೂರು ನಗರ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.