ಕಾರ್ಕಳ, ಮೇ 05 (DaijiworldNews/HR): ಕುಕ್ಕುಂದೂರು ಗ್ರಾಮದ ಜೋಡುರಸ್ತೆ ಮಟನ್ ಸ್ಟಾಲ್ ಬಳಿಯಲ್ಲಿರುವ ಮನೆಯೊಂದರಲ್ಲಿ ದಂಪತಿಗಳ ನಡುವೆ ಜಗಳ ನಡೆದು ಪತ್ನಿ ಮನನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಮೃತರನ್ನು ಲೋಕೇಶ್ ಎಂಬವರ ಪತ್ನಿ ಶೋಭಾ(28) ಎಂದು ಗುರುತಿಸಲಾಗಿದೆ.
ಲೋಕೇಶ್ ಮದ್ಯಪಾನ ಮಾಡಿ ಮನೆಗೆ ಬಂದು ಪತ್ನಿ ಶೋಭಾಳೊಂದಿಗೆ ಜಗಳ ಮಾಡಿದ್ದಾರೆ. ಇದೇ ಸಿಟ್ಟಿನಲ್ಲಿ ಶೋಭಾ ಕೋಣೆ ಓಳಗೆ ಹೋಗಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇನ್ನು ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821